ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಬಾರಿ ಎನ್ಡಿಎ ಸರ್ಕಾರ ರಚನೆಯಾಗಿದೆ. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದಿಂದ ಆಯ್ಕೆಯಾದ ಐವರು ಸಂಸದರು ಸಚಿವರಾಗಿದ್ದು, ಇಂದು ಖಾತೆ ಹಂಚಿಕೆಯಾಗಿದೆ. ಐವರಲ್ಲಿ ಮೂವರಿಗೆ ಕ್ಯಾಬಿನೆಟ್ ದರ್ಜೆ ಮತ್ತು ಇಬ್ಬರಿಗೆ ರಾಜ್ಯ ಸಚಿವ ಖಾತೆ ಒಲಿದಿದೆ.
ಯಾರಿಗೆ ಯಾವ ಖಾತೆ?:ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತು ಕರ್ನಾಟಕದಿಂದ ರಾಜ್ಯಸಭೆ ಸದಸ್ಯೆಯಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಖಾತೆ ಹಂಚಿಕೆಯಾಗಿದೆ.
ಹೆಚ್ಡಿಕೆಗೆ ಸಂಪುಟ ದರ್ಜೆ:ಮೋದಿ 3.0 ಸರ್ಕಾರದಲ್ಲಿ ಎನ್ಡಿಎ ಮೈತ್ರಿ ಪಕ್ಷವಾಗಿರುವ ಜೆಡಿಎಸ್ಗೆ ಒಂದು ಸಚಿವ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ. ಇವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಒಲಿದಿದೆ.
ಪ್ರಲ್ಹಾದ್ ಜೋಶಿ ಖಾತೆ ಬದಲು: ಕಳೆದ ಬಾರಿ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದ ಪ್ರಲ್ಹಾದ್ ಜೋಶಿ ಅವರಿಗೆ ಈ ಬಾರಿ ಬೇರೆ ಖಾತೆ ನೀಡಲಾಗಿದೆ. ಈ ಬಾರಿ ಗ್ರಾಹಕ, ಆಹಾರ ಮತ್ತು ವಿತರಣೆ, ನವೀಕರಿಸಬಹುದಾದ ಇಂಧನ ಖಾತೆ ಹಂಚಿಕೆ ಮಾಡಲಾಗಿದೆ.