ಬೆಂಗಳೂರು:ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆ ಏಪ್ರಿಲ್ 24 ರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಜೂನ್ 4ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೆ. ಎ. ದಯಾನಂದ ಆದೇಶಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯೆ ವ್ಯಾಪ್ತಿಯಲ್ಲಿ ಯಾವುದೇ ಅಹಿತರ ಘಟನೆಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಂಡ ಪ್ರಕ್ರಿಯ ಸಂಹಿತೆ ಅನ್ವಯ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರೆವಣಿಗೆ ಹಾಗೂ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಲಾಗುತ್ತದೆ. ಚುನಾವಣಾ ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚು ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ಬಳಸುವಂತಿಲ್ಲ.
ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣಾ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದಲ್ಲಿ ಬರುವಂತಹ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್ ಗಳನ್ನು ನಿರ್ಬಂಧಿಸಲಾಗುತ್ತದೆ. ಕಲ್ಲುಗಳನ್ನು ಕ್ಷಾರ ಪದಾರ್ಥ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.