ಕರ್ನಾಟಕ

karnataka

ETV Bharat / state

ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್ - D K Suresh - D K SURESH

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

Etv Bharat
Etv Bharat

By ETV Bharat Karnataka Team

Published : Mar 28, 2024, 10:13 AM IST

Updated : Mar 28, 2024, 12:19 PM IST

ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ.ಕೆ.ಸುರೇಶ್

ರಾಮನಗರ:ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಭಾರೀ ಪೈಪೋಟಿ ಸಾಧ್ಯತೆಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಇಂದು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ಡಿ.ಕೆ.ಸುರೇಶ್ ತಮ್ಮ ಮನೆ ದೇವರು ಸ್ವಕ್ಷೇತ್ರ ಕನಕಪುರದ ಕೆಂಕೇರಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ರಾಮನಗರದ ಚಾಮುಂಡೇಶ್ವರಿ ದೇವಾಲಯದಲ್ಲೂ ವಿಶೇಷ ಪೂಜೆ ನೆರವೇರಿಸಿದರು. ಇದಕ್ಕೂ ಮುನ್ನ ಸಹೋದರ ಡಿಕೆ ಶಿವಕುಮಾರ್ ಹಾಗೂ ಅತ್ತಿಗೆ ಉಷಾ ಶಿವಕುಮಾರ್ ಅವರಿಂದ ಡಿಕೆ ಸುರೇಶ್ ಆಶೀರ್ವಾದ ಪಡೆದರು.

ಹಳೆ ಬೆಂಗಳೂರು ಮೈಸೂರು ಹೆದ್ದಾರಿಯ ಮೂಲಕ ಸಾವಿರಾರು ಕಾರ್ಯಕರ್ತರ ಮೆರವಣಿಗೆ ಮೂಲಕ ಡಿ.ಕೆ.ಸುರೇಶ್ ಸಾಗಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಮನೆ ದೇವರಿಗೆ ಪೂಜೆ ಸಲ್ಲಿಸಿದ ಡಿ ಕೆ ಸುರೇಶ್

ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಕಣಕ್ಕಿಳಿದಿದ್ದಾರೆ. ಇದರಿಂದಾಗಿ ಡಿ.ಕೆ.ಸುರೇಶ್ ಮತ್ತು ಡಾ.ಮಂಜುನಾಥ್ ನಡುವೆ ನೇರಾನೇರ ಸ್ಪರ್ಧೆ ಏರ್ಪಡಲಿದೆ.

ಇದನ್ನೂ ಓದಿ:ಮೋದಿ ಗ್ಯಾರಂಟಿ ಟಿವಿಯಲ್ಲಿ, ನಮ್ಮ ಗ್ಯಾರಂಟಿ ಜನರ ಕೈಯಲ್ಲಿ: ಪ್ರಿಯಾಂಕ್ ಖರ್ಗೆ - Priyank Kharge

ಲೋಕಸಭೆಯ ಮೊದಲ ಹಂತದಲ್ಲಿ ರಾಜ್ಯದ ದಕ್ಷಿಣ ಕರ್ನಾಟಕ, ಹಳೆ ಮೈಸೂರು ಹಾಗೂ ಬಯಲುಸೀಮೆ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4ರಂದು ಕೊನೆಯ ದಿನ. ಏ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.8ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮತದಾನ ಏ.26 ರಂದು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿದ್ದು, ಕೇಂದ್ರ ಚುನಾವಣಾ ಆಯೋಗ ಎರಡು ಹಂತದಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಿದೆ. ಮೊದಲ ಹಂತದಲ್ಲಿ ಮತದಾನ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಜರುಗಲಿದೆ.

ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳು:ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್ಸಿ ಮೀಸಲು ಕ್ಷೇತ್ರ), ಉಡುಪಿ- ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ(ಎಸ್ಸಿ ಮೀಸಲು ಕ್ಷೇತ್ರ), ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ (ಎಸ್ಸಿ ಮೀಸಲು ಕ್ಷೇತ್ರ).

ಇದನ್ನೂಓದಿ:'ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ': ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ - D K Shivakumar

Last Updated : Mar 28, 2024, 12:19 PM IST

ABOUT THE AUTHOR

...view details