ಬೆಳಗಾವಿ: ಬೆಳಗಾವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಗ್ರೇಡ್–2 ಕಾರ್ಯದರ್ಶಿ ಭೂ ಪರಿವರ್ತನೆ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಮರೆಡ್ಡಿ ಪಾಟೀಲ ಹಾಗೂ ಗ್ರೇಡ್–2 ಕಾರ್ಯದರ್ಶಿ ವೈಜನಾಥ ಸನದಿಯನ್ನು ವಶಕ್ಕೆ ಪಡೆಯಲಾಗಿದೆ.
ಬೆಳಗಾವಿ ನಗರದ ಕಾಕತಿವೇಸ್ ಪ್ರದೇಶದ ನಿವಾಸಿ ಶಾನವಾಜ್‌ಖಾನ್ ಪಠಾಣ (52) ಅವರು ತಮ್ಮ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ ರಾಮರೆಡ್ಡಿ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಶಾನವಾಜ್‌ಖಾನ್ ಅವರನ್ನು ಹಲವು ದಿನಗಳಿಂದ ಪದೇ ಪದೆ ಕಚೇರಿಗೆ ಅಲೆದಾಡಿಸಿದ್ದರು. ಇದರಿಂದ ಬೇಸತ್ತಿದ್ದ ಶಾನವಾಜ್‌ಖಾನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.