ಬೆಂಗಳೂರು:ರಾಜ್ಯದ ವಿವಿಧೆಡೆ ಇಂದು 8 ಮಂದಿ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಸಮತೋಲಿತ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.
ಬಳ್ಳಾರಿಯ ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ದಾಳಿ:ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ರಾಮಾಂಜನೇಯ ನಗರದಲ್ಲಿರುವ ನಿವಾಸ, ಸಂಬಂಧಿಕರು ಹಾಗೂ ಸ್ನೇಹಿತರ ನಿವಾಸದ ಮೇಲೂ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಖಾನಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ:ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಖಾನಾಪುರ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ಗಣೇಶಪುರದ ಮನೆ, ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಈ ದಾಳಿಯಲ್ಲಿ ಭಾಗಿಯಾಗಿದ್ದಾರೆ.
ದಾಳಿಗೊಳಗಾದ ಅಧಿಕಾರಿಗಳ ವಿವರ:
ಅಧಿಕಾರಿಯ ಹೆಸರು
ಹುದ್ದೆ
ಸ್ಥಳ
ಶೋಭಾ
ಸಾರಿಗೆ ಇಲಾಖೆ ಜಂಟಿ ಆಯುಕ್ತೆ
ಬೆಂಗಳೂರು
ಡಾ.ಎಸ್.ಎನ್.ಉಮೇಶ್
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಚಿಕ್ಕಮಗಳೂರು ಜಿಲ್ಲೆ ಕಡೂರು
ರವೀಂದ್ರ
ಇನ್ಸ್‌ಪೆಕ್ಟರ್ - ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ
ಬೀದರ್ ಜಿಲ್ಲೆ ಬಸವ ಕಲ್ಯಾಣ
ಪ್ರಕಾಶ್ ಶ್ರೀಧರ್ ಗಾಯಕ್ವಾಡ್
ತಹಶೀಲ್ದಾರ್
ಬೆಳಗಾವಿ ಜಿಲ್ಲೆ ಖಾನಾಪುರ
ಎಸ್.ರಾಜು
ಪ್ರಾದೇಶಿಕ ಸಾರಿಗೆ ಅಧಿಕಾರಿ (ನಿವೃತ್ತ), ಪ್ರಾದೇಶಿಕ ಸಾರಿಗೆ ಇಲಾಖೆ
ತುಮಕೂರು
ಹುಚ್ಚೇಶ್
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಇನ್ ಚಾರ್ಜ್), ಗದಗ - ಬೆಟಗೇರಿ ಪುರಸಭೆ