ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ 30ಕ್ಕೂ ಹೆಚ್ಚು ಮಂದಿಗೆ ಕಚ್ಚಿದ ಹುಚ್ಚು ನಾಯಿ - DOG BITE

ಹುಚ್ಚು ನಾಯಿಯೊಂದು ಹುಬ್ಬಳ್ಳಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ.

DOG BITE
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Oct 28, 2024, 9:37 PM IST

ಹುಬ್ಬಳ್ಳಿ:ಹುಚ್ಚು ನಾಯಿಯೊಂದು ಕಂಡ ಕಂಡವರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ಗೋಕುಲ್ ರಸ್ತೆಯ ಅಕ್ಷಯ ಪಾರ್ಕ್ ಬಳಿ ಇಂದು ನಡೆದಿದೆ.

ಗೋಕುಲ ರೋಡ್​ನಲ್ಲಿ 30ಕ್ಕೂ ಹೆಚ್ಚು ಜನರಿಗೆ ನಾಯಿ ಕಚ್ಚಿದೆ. ಗಾಯಗೊಂಡವರಲ್ಲಿ ಹೆಚ್ಚಿನವರು ಗೋಕುಲ ರೋಡ್ ನಿವಾಸಿಗಳಾಗಿದ್ದಾರೆ. ಇಲ್ಲಿಯವರೆಗೂ ಒಟ್ಟು 16 ಜನರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೊರಳಲ್ಲಿ ಚೈನ್‌ಸಮೇತ ಬೀದಿಯಲ್ಲಿ ನಾಯಿ ತಿರುಗಾಡುತ್ತಿದ್ದ ನಾಯಿ, ಗೋಕುಲ್ ರಸ್ತೆಯಲ್ಲಿ ಮಕ್ಕಳು, ಹಿರಿಯರು, ಯುವಕರು, ಮಹಿಳೆಯರ ಮೇಲೆ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದೆ.

ಇದನ್ನೂ ಓದಿ:ರಾಜಧಾನಿಯಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿ: 8 ತಿಂಗಳಲ್ಲಿ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲು - Street dog bite cases

ABOUT THE AUTHOR

...view details