ಬೆಂಗಳೂರು:ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಸ್ಸೋಂ ಮೂಲದ ಇಸ್ಲಾಂವುದ್ದೀನ್ (31) ಬಂಧಿತ ಆರೋಪಿ. 36 ವರ್ಷ ಮಹಿಳೆಯೊಬ್ಬರು ನೀಡಿದ್ದ ದೂರಿನ ಅನ್ವಯ ಬನಶಂಕರಿ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ದೂರುದಾರ ಮಹಿಳೆಯು ಜನವರಿ 23ರಂದು ಬೆಳಗ್ಗೆ 8:30ರ ಸುಮಾರಿಗೆ ಬನಶಂಕರಿ 2ನೇ ಹಂತದ ರಸ್ತೆಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಒಂಟಿಯಾಗಿದ್ದ ಮಹಿಳೆಯನ್ನು ಗಮನಿಸಿದ್ದ ಆರೋಪಿ, ಆಕೆಯ ಹಿಂಭಾಗಕ್ಕೆ ಹೊಡೆದು ಪರಾರಿಯಾಗಿದ್ದ. ಆರೋಪಿಯ ಕೃತ್ಯದಿಂದ ನೊಂದ ಮಹಿಳೆ, ಆತನ ದ್ವಿಚಕ್ರ ವಾಹನದ ನಂಬರ್ ಸಹಿತ ಬನಶಂಕರಿ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆರೋಪಿ ಇಸ್ಲಾಂವುದ್ದೀನ್ನನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ರಾಯಚೂರು: ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಥಳಿತ; ನಾಲ್ವರ ವಿರುದ್ಧ ಪ್ರಕರಣ