ಹುಬ್ಬಳ್ಳಿ:ಪ್ರೀತಿ ಹೆಸರಲ್ಲಿ, ಹಣದಾಸೆ ತೋರಿಸಿ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು, ವಿಡಿಯೋ ಸೆರೆ ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, "ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದಡಿ 38 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಜೆರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಅಂಗಡಿ ಇಟ್ಟುಕೊಂಡಿದ್ದಾನೆ. ಅಂಗಡಿಗೆ ಬರುವ ಬಡ ಯುವತಿಯರು ಮತ್ತು ಬಾಲಕಿಯರಿಗೆ ಹಣದಾಸೆ ತೋರಿಸಿ, ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ" ಎಂದು ಮಾಹಿತಿ ನೀಡಿದ್ದಾರೆ.
"ವಿಡಿಯೋ ಕಾಲ್ನಲ್ಲಿ ಯುವತಿಯರನ್ನು ವಿವಸ್ತ್ರಗೊಳಿಸಿ, ವಿಡಿಯೋ ರೆಕಾರ್ಡ್ ಮಾಡಿಕೊಂಡಿರುವ ಬಗ್ಗೆಯೂ ತನಿಖೆಯಿಂದ ತಿಳಿದು ಬಂದಿದೆ. ಸಂತ್ರಸ್ತರು ಯಾರು ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ. ಅವರು ದೂರು ಕೊಟ್ಟರೆ ಸ್ವೀಕರಿಸಿ ತನಿಖೆ ಕೈಗೊಳ್ಳಲಾಗುತ್ತದೆ" ಎಂದು ತಿಳಿಸಿದರು.