ಕರ್ನಾಟಕ

karnataka

ETV Bharat / state

ತುಮಕೂರು : ಕೌಟುಂಬಿಕ ಕಲಹ, ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದ ಪತಿ! - MAN BRUTALLY KILLED WIFE - MAN BRUTALLY KILLED WIFE

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ.

Murder
ಕೊಲೆ (ಸಂಗ್ರಹ ಚಿತ್ರ)

By ETV Bharat Karnataka Team

Published : May 28, 2024, 4:01 PM IST

ತುಮಕೂರು : ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.

ಪುಷ್ಪ(32), ಕೊಲೆಯಾದ ಗೃಹಿಣಿ. ಪತಿ ತನ್ನ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪಳನ್ನ ಮದುವೆಯಾಗಿದ್ದ.

ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದ. ಮರದ ಸಾಮಿಲ್​ವೊಂದರಲ್ಲಿ ಹೆಲ್ಪರ್ ಆಗಿ ಶಿವರಾಮ್​ ಕೆಲಸ ಮಾಡ್ತಿದ್ದ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಗಲಾಟೆ ವಿಚಾರಕ್ಕೆ ನಿನ್ನೆ ರಾತ್ರಿ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಪತಿ ಶಿವರಾಮ್ ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಗೈದ ಪತಿ ಶಿವರಾಮ್​ನನ್ನ ಬಂಧಿಸಿದ ಹುಲಿಯೂರುದುರ್ಗ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ :ತುಮಕೂರು: ಮದ್ಯದ ಅಮಲಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ABOUT THE AUTHOR

...view details