ಚಿಕ್ಕಬಳ್ಳಾಪುರ: ಖಾಸಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ರಾಘವೇಂದ್ರ ಮೃತ ದುರ್ದೈವಿ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಎಲ್ಲರೂ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಾಲ್ ಗಾಳಿಗೆ ಹಾರಿ ವಿದ್ಯುತ್ ತಂತಿಗಳಿಗೆ ಸ್ಪರ್ಶವಾಗಿದೆ. ಹೀಗಾಗಿ ಪೆಂಡಾಲ್ ಕೆಳಗೆ ಇದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯುತ್ ಪ್ರವಹಿಸಿ ಈ ಅಪಘಡ ಸಂಭವಿಸಿದೆ. ಗೌರಿಬಿದನೂರು ಶಾಸಕ ಪುಟ್ಟಸ್ವಾಮಿ ಗೌಡ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ, ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.