ಕರ್ನಾಟಕ

karnataka

ETV Bharat / state

ಬೆಂಗಳೂರು: ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿ ಸಾವು - Crime News - CRIME NEWS

ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿಯೊಬ್ಬ ಸಾವು ಕಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

man-dies-after-jumping-from-flyover-in-bengaluru
ಬೆಂಗಳೂರು: ಮೇಲ್ಸೇತುವೆಯಿಂದ ಜಿಗಿದು ವ್ಯಕ್ತಿ ಸಾವು

By ETV Bharat Karnataka Team

Published : Apr 12, 2024, 10:50 AM IST

Updated : Apr 12, 2024, 12:52 PM IST

ಬೆಂಗಳೂರು :ಮೇಲ್ಸೇತುವೆ ಮೇಲಿಂದ ಜಿಗಿದು ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡ ಘಟನೆ ಇಂದು ಬೆಳಗ್ಗೆ ನಾಯಂಡಹಳ್ಳಿಯಲ್ಲಿ ನಡೆದಿದೆ. ನವೀನ್ (32) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕೆಪಿಟಿಸಿಎಲ್​​ನಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ. ತನ್ನ ಸ್ಕೂಟರ್ ಅ​ನ್ನು ನಾಯಂಡಹಳ್ಳಿ ಮೇಲ್ಸೇತುವೆ ಮೇಲೆ ನಿಲ್ಲಿಸಿದ್ದಾನೆ. ಬಳಿಕ ಮೇಲ್ಸೇತುವೆ ಮೇಲಿನಿಂದ ಜಿಗಿದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ನವೀನ್ ಯಾದವ್ ಕೆಂಗೇರಿ ಉಪನಗರದ ನಿವಾಸಿಯಾಗಿದ್ದು, ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು. ಮೂರು ತಿಂಗಳ ಹಿಂದಷ್ಟೆ ಕೆಪಿಟಿಸಿಎಲ್​​ನಲ್ಲಿ ಗುತ್ತಿಗೆ ಆಧಾರದ ಕೆಲಸ ಸಿಕ್ಕಿತ್ತು. ಮೇಲ್ನೋಟಕ್ಕೆ ಕೌಟುಂಬಿಕ ಜಗಳದಿಂದ ಬೇಸತ್ತು ಈ ನಿರ್ಧಾರಕ್ಕೆ ಮುಂದಾಗಿರಬಹುದು ಎಂದು‌ ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಕೊಪ್ಪಳ: ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

Last Updated : Apr 12, 2024, 12:52 PM IST

ABOUT THE AUTHOR

...view details