ಬಾಗಲಕೋಟೆ:ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕಮತಗಿ ಪಟ್ಟಣದ ಸಮೀಪದ ಇಂಗಳಗಿ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಹುನಗುಂದ ತಾಲೂಕಿನ ಚಿಕ್ಕಮಾಗಿ ಗ್ರಾಮದ ಸಂಗನಗೌಡ ಪಾಟೀಲ್ (48) ಮೃತರೆಂದು ಗುರುತಿಸಲಾಗಿದೆ.
ಬಾಗಲಕೋಟೆ: ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನ - Car Catches Fire - CAR CATCHES FIRE
ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆಯಲ್ಲಿ ಶನಿವಾರ ನಡೆಯಿತು.
ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಸಾವು (ETV Bharat)
Published : May 12, 2024, 7:26 AM IST
|Updated : May 12, 2024, 10:15 AM IST
ಕಾರಿಗೆ ಹೇಗೆ ಬೆಂಕಿ ತಗುಲಿತು ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಹಾಗೂ ಅಮೀನಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ದಕ್ಷಿಣ ಕನ್ನಡ: ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವು - laborer was died by lightning
Last Updated : May 12, 2024, 10:15 AM IST