ಕರ್ನಾಟಕ

karnataka

ETV Bharat / state

ಹಾವೇರಿ: ಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ- ವ್ಯಕ್ತಿ ಸಾವು - MAN DIED AFTER BRUTAL ASSAULT

ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಘಟನೆ ಹಾನಗಲ್ ತಾಲೂಕಿನಲ್ಲಿ ನಡೆದಿದೆ.

HAVERI  ಕೊಪ್ಪರಸಿಕೊಪ್ಪ ಗ್ರಾಮ  EXTRAMARITAL AFFAIR CASE  HANAGAL MURDER CASE
ಹಾನಗಲ್ ಪೊಲೀಸ್​ ಠಾಣೆ (ETV Bharat)

By ETV Bharat Karnataka Team

Published : Dec 27, 2024, 10:34 AM IST

ಹಾವೇರಿ:ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಪ್ರಕರಣ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ.

ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ.

ಎಫ್​ಐಆರ್​ ವಿವರ:''ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂದ ಆರೋಪಿತರು ತಮ್ಮ ಮನೆಯ ಹೆಣ್ಣು ಮಕ್ಕಳೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅವಾಚ್ಯವಾಗಿ ಶಬ್ದಗಳಿಂದ ನಿಂದಿಸಿದ್ದಾರೆ. ಆಗ ನನ್ನ ಸಹೋದರ ಪ್ರಕಾಶ್​, ಈ ರೀತಿ ಆರೋಪ ಮಾಡುವುದು ಸರಿಯಲ್ಲ, ನನಗೆ ಅವಳೊಂದಿಗೆ ಅನೈತಿಕ ಸಂಬಂಧ ಇಲ್ಲ ಎಂದಿದ್ದಾನೆ. ಆದರೆ ಕೋಪಗೊಂಡ ಆರೋಪಿಗಳು ಆತನ ಮೇಲೆ ಹಲ್ಲೆ ಮಾಡಿ, ವಿದ್ಯುತ್​ ಕಂಬಕ್ಕೆ ಕಟ್ಟಿ ಮಾರಣಾಂತಿಕವಾಗಿ ಥಳಿಸಿದ್ದಾರೆ. ಇದರಿಂದ ಗಾಯಗೊಂಡ ಪ್ರಕಾಶನನ್ನು ಹಾನಗಲ್ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ'' ಎಂದು ಮೃತನ ಸಹೋದರ ಫಕ್ಕೀರೇಶ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೆ, ಆರೋಪಿಗಳು ಫಕ್ಕೀರೇಶ ಮತ್ತು ಮಹಿಳೆಗೂ ಕೂಡ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ದೂರಿನ ಅನ್ವಯ ಹಾನಗಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಂ: 103(1),74,189(2), 191(2),191(3), 115(2), 118(1)352, 351(2)(3), 126(2), 133, 190 ಬಿಎನ್‍ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 07 ಮಂದಿ ಆರೊಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:20 ಸಾವಿರಕ್ಕಾಗಿ ಪಾರ್ಟ್ನರ್ಸ್ ನಡುವೆ ಆರಂಭವಾದ ಗಲಾಟೆ ಹತ್ಯೆಯಲ್ಲಿ ಅಂತ್ಯ

ABOUT THE AUTHOR

...view details