ಕರ್ನಾಟಕ

karnataka

ETV Bharat / state

ಬೆಂಗಳೂರು: ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ತನಿಖೆಗೆ ವಿಶೇಷ ತಂಡ ರಚನೆ - Murder Inside PG Accommodation - MURDER INSIDE PG ACCOMMODATION

ಪಿಜಿಯೊಳಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

murder
ಪಿಜಿಯಲ್ಲಿ ಯುವತಿಯ ಕೊಲೆ (ETV Bharat)

By ETV Bharat Karnataka Team

Published : Jul 24, 2024, 9:18 AM IST

Updated : Jul 24, 2024, 1:00 PM IST

ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ (ETV Bharat)

ಬೆಂಗಳೂರು:ಮಹಿಳಾ ಪೇಯಿಂಗ್​ ಗೆಸ್ಟ್​ (ಪಿ.ಜಿ) ಒಳಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ಕೋರಮಂಗಲದ ವಿ.ಆರ್.ಲೇಔಟ್‌ನಲ್ಲಿ ನಡೆದಿದೆ. ಬಿಹಾರ ಮೂಲದ ಕೃತಿ ಕುಮಾರಿ‌ (24) ಕೊಲೆಯಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೃತಿ ಕುಮಾರಿ ಕೆಲಸ ಮಾಡುತ್ತಿದ್ದರು. ತಡರಾತ್ರಿ 11.10ರ ಸುಮಾರಿಗೆ ಚಾಕು ಹಿಡಿದು ಪಿ.ಜಿಯೊಳಗೆ ನುಗ್ಗಿದ ಆರೋಪಿ, 3ನೇ ಮಹಡಿಯಲ್ಲಿನ ರೂಮಿನ ಸಮೀಪದಲ್ಲೇ ಯುವತಿ ಮೇಲೆ ಚಾಕುವಿನಿಂದ ಕತ್ತು ಕೊಯ್ದು ಕೊಲೆಗೈದು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪರಿಚಯಸ್ಥ ವ್ಯಕ್ತಿಯಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಪಿ.ಜಿಯಲ್ಲಿನ ಭದ್ರತಾ ವೈಫಲ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಮಣ್ ಗುಪ್ತಾ ಪ್ರತಿಕ್ರಿಯೆ:''ಪ್ರಕರಣದ ಕುರಿತು ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನದ ಬಳಿಕವಷ್ಟೇ ಕೃತ್ಯದ ಹಿಂದಿನ ಕಾರಣ ತಿಳಿಯಲಿದೆ'' ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ತಿಳಿಸಿದ್ದಾರೆ.

''ಘಟನೆಯ ಕುರಿತು ರಾತ್ರಿ 12 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ತಕ್ಷಣ ಕೋರಮಂಗಲ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿ ಮೂಲತಃ ಬಿಹಾರದವರು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಪಿ.ಜಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಹತ್ಯೆಯಾದ ಯುವತಿ ಹಾಗೂ ಆರೋಪಿ ಪರಿಚಿತರಾ? ಕೃತ್ಯಕ್ಕೆ ಕಾರಣವೇನು? ಎಂಬುದು ತನಿಖೆಯ ನಂತರ ತಿಳಿಯಲಿದೆ'' ಎಂದು ರಮಣ್ ಗುಪ್ತಾ ಮಾಹಿತಿ ನೀಡಿದರು.

ಇದನ್ನೂ ಓದಿ:ವೈಷ್ಣೋದೇವಿ ದೇವಸ್ಥಾನದ ಧರ್ಮದರ್ಶಿ ದೇವೇಂದ್ರಪ್ಪ ಹತ್ಯೆ ಪ್ರಕರಣ: ಆರೋಪಿ ಬಂಧನ - Hubballi Murder Case

Last Updated : Jul 24, 2024, 1:00 PM IST

ABOUT THE AUTHOR

...view details