ಮಂಗಳೂರು:ಅಪರಿಚಿತ ವ್ಯಕ್ತಿಯ ಮಾತು ನಂಬಿ ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆ ಕೈ ಹಾಕಿದ ಕಡಬದ ಇಚ್ಲಂಪಾಡಿ ನಿವಾಸಿ ಯುವಕನೊಬ್ಬ ಒಂದು ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಕ್ರಿಪ್ಟೋಕರೆನ್ಸಿ ವಂಚನೆ: ಕಡಬದ ವ್ಯಕ್ತಿ ಕಳೆದುಕೊಂಡದ್ದು ₹1.05 ಕೋಟಿ! - Cryptocurrency Scam - CRYPTOCURRENCY SCAM
ಕ್ರಿಪ್ಟೋ ಕರೆನ್ಸಿ ವ್ಯವಹಾರ ನಂಬಿದ ಕಡಬದ ವ್ಯಕ್ತಿಯೊಬ್ಬರು ಅಪರಿಚಿತರ ಸಹವಾಸದಿಂದ ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದಾರೆ.
Published : May 30, 2024, 1:10 PM IST
ಇಚ್ಲಂಪಾಡಿ ಗ್ರಾಮದ ಕೆಡೆಂಬೈಲು ಪುಲಿಕ್ಕಲ್ನ 43 ವರ್ಷದ ವ್ಯಕ್ತಿ ಹಣ ಕಳೆದುಕೊಂಡವರು. 2023ರ ಮೇ 25ರಂದು ಟೆಲಿಗ್ರಾಮ್ ಆ್ಯಪ್ ಮೂಲಕ ಅಪರಿಚಿತನೊಬ್ಬ ಇವರಿಗೆ ಪರಿಚಯವಾಗಿದ್ದ. ಆತ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಬರುವುದಾಗಿ ನಂಬಿಸಿದ್ದಾನೆ. ಅದರಂತೆ, ಅಮೆರಿಕದ ಕ್ರಿಪ್ಟೋಗೆ ಹಣ ಹೂಡಿಕೆ ಮಾಡಲು ಬಿನೇನ್ಸ್ ಆ್ಯಪ್ ಮತ್ತು ಡಿಫೈ ಆ್ಯಪ್ ಡೌನ್ಲೋಡ್ ಮಾಡುವಂತೆ ಸೂಚಿಸಿದ್ದಾನೆ. ಆತ ಹೇಳಿದಂತೆ ತಮ್ಮ ಮೊಬೈಲ್ನಲ್ಲಿ ಎರಡೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿ, ತನ್ನ ಬ್ಯಾಂಕ್ ಖಾತೆಗಳಿಂದ 1,05,79,711 ರೂ. ಹಣ ವರ್ಗಾಯಿಸಿದ್ದಾರೆ. ಕ್ರಿಪ್ಟೋ ಕರೆನ್ಸಿಯಲ್ಲಿ ಟ್ರೇಡಿಂಗ್ ಮಾಡುವುದಕ್ಕಾಗಿ ಆ್ಯಪ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿದ್ದರು. ಆದರೆ, ಆ ಬಳಿಕ ಹಣ ಹಿಂತಿರುಗಿ ತೆಗೆಯಲಾಗದೇ ಇದ್ದಾಗ ಅವರಿಗೆ ತಾವು ಮೋಸ ಹೋಗಿರುವುದು ತಿಳಿದುಬಂದಿದೆ. ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿ ಯುವಕರ ಪುಂಡಾಟ - Miscreants Damaged Vehicles