ಕರ್ನಾಟಕ

karnataka

ETV Bharat / state

ಪಿಡಿಒ ನೇಮಕಾತಿಗಾಗಿ ಗ್ರಾಪಂ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ - protest for PDO appointment - PROTEST FOR PDO APPOINTMENT

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮ ಪಂಚಾಯಿತಿಗೆ ಪಿಡಿಒ ನೇಮಕಾತಿ ಮಾಡುವಂತೆ ವ್ಯಕ್ತಿಯೊಬ್ಬರು ಒತ್ತಾಯಿಸಿ, ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿದ್ದಾರೆ.

man-protest-in-front-of-gram-panchayat
ಗ್ರಾಪಂ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ (ETV Bharat)

By ETV Bharat Karnataka Team

Published : Sep 28, 2024, 7:20 PM IST

Updated : Sep 28, 2024, 8:01 PM IST

ಚಿಕ್ಕಮಗಳೂರು : ಗ್ರಾಮ ಪಂಚಾಯಿತಿಗೆ ಪಿಡಿಓ ನೇಮಕ ಮಾಡುವಂತೆ ಆಗ್ರಹಿಸಿ, ವ್ಯಕ್ತಿಯೋರ್ವ ಗ್ರಾಮ ಪಂಚಾಯಿತಿ ಮುಂದೆ ಏಕಾಂಗಿಯಾಗಿ ಮೌನ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮ ಪಂಚಾಯಿತಿ ಬಳಿ ನಡೆದಿದೆ.

ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರುವ ಹಳ್ಳಿಯೊಂದರ ಸಂಜಯ್ ಎಂಬುವ ವ್ಯಕ್ತಿ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒ ಇಲ್ಲದೇ ಯಾವುದೇ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. 15ನೇ ಹಣಕಾಸು ಯೋಜನೆಯಡಿ ಹಣವಿದ್ದರೂ ಯಾವುದೇ ಕೆಲಸ ಆಗುತ್ತಿಲ್ಲ. ಇರುವ ಪಿಡಿಒ ವಾರಕ್ಕೆ ಒಂದು ಅಥವಾ ಎರಡು ಬಾರಿ ಬಂದು ಹೋಗುತ್ತಾರೆ. ಇದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲಸ ಕಾರ್ಯಗಳು ಹಾಗೇ ಉಳಿದಿವೆ. ಹಾಗಾಗಿ, ಗ್ರಾಮ ಪಂಚಾಯಿತಿಗೆ ಖಾಯಂ ಪಿಡಿಒ ಅವರನ್ನ ನೇಮಕ ಮಾಡುವಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆ ನಡೆಸಿದ ಸಂಜಯ್ ಮಾತನಾಡಿದರು (ETV Bharat)

ಖಾಯಂ ಪಿಡಿಒ ನೇಮಕ ಮಾಡುವಂತೆ ಆಗ್ರಹ : ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ದಿನದಿಂದ ದಿನಕ್ಕೆ ಆ‌ ಸಮಸ್ಯೆಗಳು ಹೆಚ್ಚಾಗುತ್ತಿವೆ. ಹಾಗಾಗಿ, ಸರ್ಕಾರ ಜನರ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ತರುವೆ ಗ್ರಾಮ ಪಂಚಾಯಿತಿಗೆ ಖಾಯಂ ಪಿಡಿಒ ನೇಮಕ ಮಾಡುವಂತೆ ಆಗ್ರಹಿಸಿ, ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ.

ಸರ್ಕಾರ ಕೂಡಲೇ ಖಾಯಂ ಪಿಡಿಒ ಅವರನ್ನ ನೇಮಿಸದಿದ್ದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ :ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ - Belagavi Protest

Last Updated : Sep 28, 2024, 8:01 PM IST

ABOUT THE AUTHOR

...view details