ಕರ್ನಾಟಕ

karnataka

ETV Bharat / state

ಚಾಮರಾಜನಗರ: ಮನೆಯ ಮೂವರಿಗೆ ಚಾಕು ಇರಿದ ವ್ಯಕ್ತಿ; ತಂಗಿ ಸಾವು, ಇಬ್ಬರು ಗಂಭೀರ - WOMAN STABBED TO DEATH

ವ್ಯಕ್ತಿಯೊಬ್ಬ ತನ್ನ ಮನೆಯ ಮೂವರಿಗೆ ಚಾಕುವಿನಿಂದ ಇರಿದಿದ್ದು ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

MAN STABS ENTIRE FAMILY OVER TRIVIAL REASON IN CHAMARAJANAGAR
ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರಿಂದ ಘಟನಾ ಸ್ಥಳದ ಪರಿಶೀಲನೆ (ETV Bharat)

By ETV Bharat Karnataka Team

Published : Jan 2, 2025, 9:42 AM IST

Updated : Jan 2, 2025, 10:12 AM IST

ಚಾಮರಾಜನಗರ:ಕೋಪೋದ್ರಿಕ್ತವ್ಯಕ್ತಿ ತನ್ನ ಮನೆಯ ಮೂವರಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ.

ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25) ಗಂಭೀರವಾಗಿ ಗಾಯಗೊಂಡು ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರ ಬಂದಿದ್ದ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದೇ ಕಲಹಕ್ಕೆ ಕಾರಣ. ಇದರಿಂದ ಕೋಪಗೊಂಡ ವ್ಯಕ್ತಿ ಎಲ್ಲರಿಗೂ ಚಾಕುವಿನಿಂದ ಇರಿದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಚಾಕು ಇರಿದ ಫರ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಗಲಾಟೆ?:ಫರ್ಮಾನ್ ತನ್ನ ಅಣ್ಣನ ಮಗಳಿಗೆ ಸೌತೆಕಾಯಿ ತಿನ್ನಿಸುತ್ತಿದ್ದಾಗ ಸಹೋದರಿ ಐಮಾನ್ ಬಾನು, ಜ್ವರ ಬಂದಿರುವ ಮಗುವಿಗೆ ಸೌತೆಕಾಯಿ ಏಕೆ ತಿನ್ನಿಸುತ್ತಿದ್ದಿಯಾ ಎಂದು ಪ್ರಶ್ನಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಐಮಾನ್​ ಅವರಿಗೆ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಬಳಿಕ, ತಂದೆ ಸೈಯದ್ ಮತ್ತು ಅತ್ತಿಗೆಗೂ ಇರಿದಿದ್ದಾನೆ. ಗಲಾಟೆಯಲ್ಲಿ ಸೈಯದ್​ ಅವರ ಕೈ ಕೂಡಾ ಮುರಿದಿದೆ.

ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ - YOUNG MAN STABBED

Last Updated : Jan 2, 2025, 10:12 AM IST

ABOUT THE AUTHOR

...view details