ಕರ್ನಾಟಕ

karnataka

ETV Bharat / state

ಕಾರವಾರ: ತಂದೆ ಕೊಂದ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ - COURT JUDGEMENT IN MURDER CASE

ತಂದೆಯನ್ನೇ ಕೊಂದ ಅಪರಾಧಿಗೆ ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

COURT JUDGEMENT IN MURDER CASE
ಸಂಗ್ರಹ ಚಿತ್ರ (ETV Bharat)

By ETV Bharat Karnataka Team

Published : Dec 4, 2024, 9:37 PM IST

ಕಾರವಾರ: ಅನಾವಶ್ಯಕವಾಗಿ ಕಾಲಹರಣ ಮಾಡದೇ ಕೆಲಸಕ್ಕೆ ಹೋಗುವಂತೆ ಬುದ್ಧಿವಾದ ಹೇಳಿದ ತಂದೆಯನ್ನೇ ಕೊಲೆಗೈದ ಮಗನಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಸಾವಿರ ರೂ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ.ಎಸ್.ವಿಜಯಕುಮಾರ್ ಆದೇಶಿಸಿದ್ದಾರೆ.

ಹೊನ್ನಾವರ ಕರ್ಕಿ ಗ್ರಾಮದ ತೊಪ್ಪಲಕೇರಿಯ ಭರತ್ ಮೇಸ್ತ ಶಿಕ್ಷೆಗೊಳಗಾದ ಅಪರಾಧಿ. ಈತ ಏ.21 2023ರಲ್ಲಿ ಮನೆಯ ಕೆಲಸವನ್ನು ಮಾಡದೇ ಊರಿನಲ್ಲಿ ಅನಾವಶ್ಯಕವಾಗಿ ಕಾಲಹರಣ ಮಾಡುತ್ತಿದ್ದಾಗ ಈತನ ತಂದೆ ಪಾಂಡುರಗ ಮೇಸ್ತ ಎಲ್ಲಿಯಾದರೂ ಕೆಲಸಕ್ಕೆ ತೆರಳುವಂತೆ ತಿಳಿಸಿದ್ದರು. ಆದರೂ ಮತ್ತೆ ಸುತ್ತಾಡುತ್ತಿದ್ದ.

ಒಂದು ದಿನ ಆರೋಪಿಯನ್ನು ಮನೆಯಿಂದ ಹೊರಗೆ ಹೋಗುವುದನ್ನು ತಡೆದಾಗ ಸಿಟ್ಟಿಗೆದ್ದು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಬಗ್ಗೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯ 23 ಸಾಕ್ಷಿದಾರರನ್ನು ಹಾಗೂ 83 ದಾಖಲೆಗಳನ್ನು ಗುರುತಿಸಿ ಈ ಮೇಲಿನ ತೀರ್ಪು ನೀಡಿ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭೀಯೋಜಕಿ ತನುಜಾ ಬಿ.ಹೊಸಪಟ್ಟಣ ವಾದಿಸಿದ್ದರು.

ಇದನ್ನೂ ಓದಿ:ತುಮಕೂರು ಗ್ಯಾಂಗ್‌ ರೇಪ್‌ ಪ್ರಕರಣ; ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ABOUT THE AUTHOR

...view details