ಮಂಡ್ಯ:ಏಪ್ರಿಲ್ 26 (ನಾಳೆ) ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ಮತದಾನ ಪ್ರಕ್ರಿಯೆ ನಡೆಯುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
- ಮಂಡ್ಯ ಜಿಲ್ಲೆಯಲ್ಲಿ ಒಟ್ಟು ಮತಗಟ್ಟೆಗಳು - 2,076.
- ಸೂಕ್ಷ್ಮ ಮತಗಟ್ಟೆಗಳ ಸಂಖ್ಯೆ - 693.
- ಮಂಡ್ಯ ಜಿಲ್ಲೆಯಲ್ಲಿ ಒಟ್ಟು ಮತದಾರರ ಸಂಖ್ಯೆ- 17,79,243.
- ಪುರುಷ ಮತದಾರರು - 8,76,112.
- ಮಹಿಳಾ ಮತದಾರರು - 9,02,963.
- ಇತರೆ ಮತದಾರರು - 168.
ಮಂಡ್ಯದಲ್ಲಿ ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಮತಗಟ್ಟೆಗಳ 200 ಮೀ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ರಾಜಕೀಯ ಟೆಂಟ್ಗೆ ನಿಷೇಧ ಹೇರಲಾಗಿದೆ. ಮತಗಟ್ಟೆಯಲ್ಲಿ ಮೂರು ಜನ ಏಜೆಂಟ್ ನೇಮಕ ಮಾಡಿಕೊಳ್ಳುವ ಅವಕಾಶ ಮಾಡಲಾಗಿದೆ. ನಿನ್ನೆ ಸಂಜೆ 5 ಗಂಟೆಯಿಂದ ಏ.27ರ ಸಂಜೆ 6ರ ವರೆಗೆ ಜಿಲ್ಲಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹಾಗೇ ಜಿಲ್ಲಾದ್ಯಂತ 3,366 ಪೊಲೀಸ್ ಸಿಬ್ಬಂದಿಗಳ ನಿಯೋಜನೆ. ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗಾಗಿ ವೀಲ್ ಚೇರ್ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲ ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನದ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ. ಮತಗಟ್ಟೆಗಳಲ್ಲಿ ಮೊಬೈಲ್ ನಿಷೇಧಿಸಿದ್ದು, ಒಬ್ಬ PROಗೆ ಮಾತ್ರ ಮೊಬೈಲ್ ಬಳಕೆಗೆ ಅವಕಾಶವಿದೆ.