ಕರ್ನಾಟಕ

karnataka

ETV Bharat / state

ದೀಪಾವಳಿ ಹಬ್ಬಕ್ಕೆ ಮಂಗಳೂರು - ಬೆಂಗಳೂರು ವಿಶೇಷ ರೈಲು ಓಡಾಟ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯು ಮಂಗಳೂರು - ಬೆಂಗಳೂರು ನಡುವೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಿದೆ.

special train
ರೈಲು ನಿಲ್ದಾಣ (IANS)

By ETV Bharat Karnataka Team

Published : Oct 18, 2024, 7:59 AM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯು ಮಂಗಳೂರು - ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಲು ಮುಂದಾಗಿದೆ.

ಬೆಂಗಳೂರು ಯಶವಂತಪುರ - ಮಂಗಳೂರು (06565) ವಿಶೇಷ ರೈಲು ಅಕ್ಟೋಬರ್​ 30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ರ ವೇಳೆಗೆ ಮಂಗಳೂರು ತಲುಪಲಿದೆ. ಹಾಗೆಯೇ, ಮಂಗಳೂರು - ಯಶವಂತಪುರ (06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು, ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಮಾಹಿತಿ (ETV Bharat)

ದೀಪಾವಳಿ ಹಬ್ಬದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಗಳೂರು - ಮಂಗಳೂರು ನಡುವೆ ಸಂಚರಿಸುತ್ತಾರೆ. ಹೀಗಾಗಿ, ಹಬ್ಬದ ಸೀಸನ್‌ನಲ್ಲಿ ಈಗಾಗಲೇ ಪ್ರಯಾಣಿಕರ ದಟ್ಟಣೆ ಜಾಸ್ತಿಯಾಗಿ ಬಸ್‌ಗಳಲ್ಲಿ ಟಿಕೆಟ್ ಲಭ್ಯವಾಗದ ಕಾರಣ ಹಲವರು ಊರಿಗೆ ಬರಲು ಸಾಧ್ಯವಾಗದೇ ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ, ಕರಾವಳಿ ಭಾಗದ ಜನರಿಗೆ ದೀಪಾವಳಿ ಹಬ್ಬಕ್ಕೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ನೈರುತ್ಯ ರೈಲ್ವೆ ವಲಯ ಹಾಗೂ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರು.

ಮನವಿಗೆ ಸ್ಪಂದಿಸಿದ ರೈಲ್ವೆ ಇಲಾಖೆ, ವಿಶೇಷ ರೈಲು ಸೇವೆಯನ್ನು ಒದಗಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹಾಗೂ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಕೃತಜ್ಞತೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ರೈಲ್ವೆ ಟಿಕೆಟ್​ 4 ತಿಂಗಳು ಮೊದಲೇ ಬುಕ್​ ಮಾಡುವಂತಿಲ್ಲ: ಸರ್ಕಾರದಿಂದ ಹೊಸ ನಿಯಮ​ ಜಾರಿ

ABOUT THE AUTHOR

...view details