ಮಂಗಳೂರು: ನಗರದ ಹೊರವಲಯ ವಳಚ್ಚಿಲ್ನಲ್ಲಿರುವ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಫುಡ್ ಪಾಯಿಸನ್‌ನಿಂದಾಗಿ ಅಸ್ವಸ್ಥರಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಭೇದಿ, ಹೊಟ್ಟೆ ನೋವಿನಿಂದ ಬಳಲಿದ್ದು, ತುಂಬೆಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ವಿದ್ಯಾರ್ಥಿಗಳನ್ನು ಮುಕ್ಕದಲ್ಲಿರುವ ಶ್ರೀನಿವಾಸ ಆಸ್ಪತ್ರೆಗೆ ಸೇರಿಸಲಾಗಿದೆ.
ಮಂಗಳೂರು: ಫುಡ್ ಫಾಯಿಸನ್‌ನಿಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ - ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜು
ಮಂಗಳೂರಿನ ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಫುಡ್ ಪಾಯಿಸನ್ ಉಂಟಾಗಿ ಅಸ್ವಸ್ಥರಾಗಿದ್ದಾರೆ.
ಮಂಗಳೂರು
Published : Feb 8, 2024, 4:23 PM IST
ಈ ಬಗ್ಗೆ 'ಈಟಿವಿ ಭಾರತ'ದ ಜೊತೆಗೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ, "ಹಾಸ್ಟೆಲ್‌ನಲ್ಲಿ ಆಹಾರ ಸೇವಿಸಿದ 35 ವಿದ್ಯಾರ್ಥಿಗಳು ಭೇದಿ, ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದಾರೆ. ಅಲ್ಲಿಗೆ ನಾನು ತಂಡದೊಂದಿಗೆ ಹೋಗಿ ಪರಿಶೀಲನೆ ನಡೆಸಿದ್ದೇನೆ. ಆಹಾರದ ಸ್ಯಾಂಪಲ್ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ" ಎಂದರು.
ಇದನ್ನೂ ಓದಿ:ಚಿತ್ರದುರ್ಗ: ಬಿಸಿಯೂಟ ಸೇವಿಸಿ 60 ಮಕ್ಕಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು