ಉಳ್ಳಾಲ(ದಕ್ಷಿಣ ಕನ್ನಡ): ನಾಟೆಕಲ್ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಬೈಕ್ ಅಪಘಾತದಲ್ಲಿ ವಿವಾಹಿತ ಮಹಿಳೆ ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೋಂದೇಲ್ನ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಯತೀಶ್ ದೇವಾಡಿಗ ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳ್ಳಾಲ: ಡಿವೈಡರ್ಗೆ ಗುದ್ದಿದ ಬೈಕ್; ವಿವಾಹಿತೆ ಸಾವು, ಸವಾರನ ಸ್ಥಿತಿ ಗಂಭೀರ - Bike Accident - BIKE ACCIDENT
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Published : Mar 25, 2024, 1:05 PM IST
ಇಬ್ಬರು ಮುಡಿಪುವಿನಲ್ಲಿ ಭಾನುವಾರ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ಗೆ ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಬಂಟ್ವಾಳ: ಅಪಘಾತದಲ್ಲಿ ಸಹಾಯ ಮಾಡಲು ತೆರಳಿದವರ ಬೈಕ್ಗಳ ಮೇಲೆ ಹರಿದ ಲಾರಿ - ROAD ACCIDENT