ಕರ್ನಾಟಕ

karnataka

ETV Bharat / state

ಎರಡನೇ ಪ್ರಕರಣದಲ್ಲಿಂದು ಪ್ರಜ್ವಲ್ ರೇವಣ್ಣಗೆ ವೈದ್ಯಕೀಯ ತಪಾಸಣೆ - Medical Test for Prajwal Revanna - MEDICAL TEST FOR PRAJWAL REVANNA

ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ಮತ್ತೆ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ.

prajwal revanna case
ಪ್ರಜ್ವಲ್ ರೇವಣ್ಣ (ETV Bharat)

By ETV Bharat Karnataka Team

Published : Jun 15, 2024, 10:25 AM IST

ಬೆಂಗಳೂರು:ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇಂದು ವೈದ್ಯಕೀಯ ತಪಾಸಣೆ ನಡೆಯಲಿದೆ. ಸಿಐಡಿಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆಗೊಳಪಟ್ಟಿದ್ದ ಪ್ರಜ್ವಲ್ ರೇವಣ್ಣ ಶನಿವಾರ ಎರಡನೇ ಪ್ರಕರಣದಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಲಿದ್ದಾರೆ.

ಬೆಳಗ್ಗೆ 11 ಗಂಟೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಶಿವಾಜಿನಗರದಲ್ಲಿರುವ ಲೇಡಿ ಕರ್ಜನ್ ಹಾಗೂ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೊಳಪಡಿಸಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ: ಇಂದು ಎಸ್​ಐಟಿ ಕಸ್ಟಡಿ ಅಂತ್ಯ - ನ್ಯಾಯಾಂಗ ಬಂಧನಕ್ಕೋ ಇಲ್ಲಾ SIT ವಶಕ್ಕೋ? - Prajwal Revanna medical test

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ 44 ವರ್ಷದ ಹಾಸನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಮೇ 1ರಂದು ಸಿಐಡಿಗೆ ದೂರು ನೀಡಿದ್ದರು. ಬಳಿಕ 60 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಸಿಐಡಿಯಲ್ಲಿ ಎರಡನೇ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದಲ್ಲಿ ವಾದಿಸಲು ನೇಮಕವಾಗಿದ್ದ ಹಿರಿಯ ವಕೀಲೆ ರಾಜೀನಾಮೆ! - Lawyer Jayna Kothari Resigned

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಎಸ್​​ಐಟಿ ಅಧಿಕಾರಿಗಳಿಂದ ಬಂಧಿತರಾದ ಪ್ರಜ್ವಲ್​ಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜೂನ್ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದರು. ಬಳಿಕ ಎಸ್​ಐಟಿ ತಂಡ ರಚಿಸಿ ತನಿಖೆಗೆ ಸರ್ಕಾರ ಆದೇಶಿಸಿತ್ತು. ಸ್ವದೇಶಕ್ಕೆ ಮರಳುತ್ತಿದ್ದಂತೆ ಪೊಲೀಸರು ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ:ಪ್ರಜ್ವಲ್ ಪ್ರಕರಣದ ಸ್ವತಂತ್ರ ನ್ಯಾಯಾಂಗ ತನಿಖೆ ಕೋರಿದ್ದ ಅರ್ಜಿ ಇತ್ಯರ್ಥ: ಎಸ್‌ಐಟಿಗೆ ಮನವಿ ಸಲ್ಲಿಸಲು ಸೂಚನೆ - High Court

ABOUT THE AUTHOR

...view details