ಕರ್ನಾಟಕ

karnataka

ETV Bharat / state

1.5 ಕೋಟಿ ಸದಸ್ಯತ್ವ ನೋಂದಣಿ ಗುರಿ: ಇಂದು ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಾಗಾರ - BJP Workshop at Bengaluru - BJP WORKSHOP AT BENGALURU

1.5 ಕೋಟಿ ಸದಸ್ಯತ್ವ ನೋಂದಣಿ ಗುರಿ ಹಿನ್ನೆಲೆ ಇಂದು ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಾಗಾರ ನಡೆಯಲಿದೆ.

MEMBERSHIP REGISTRATION  PALACE GROUND  BJP WORKSHOP  BENGALURU
1.5 ಕೋಟಿ ಸದಸ್ಯತ್ವ ನೋಂದಣಿ ಗುರಿ (ETV Bharat)

By ETV Bharat Karnataka Team

Published : Aug 24, 2024, 7:58 AM IST

ಬೆಂಗಳೂರು: ರಾಜ್ಯದಲ್ಲಿ 1.5 ಕೋಟಿ ಬಿಜೆಪಿ ಸದಸ್ಯರನ್ನು ನೋಂದಾಯಿಸುವ ಗುರಿ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ನಂದೀಶ್ ರೆಡ್ಡಿ ಅವರು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಸದಸ್ಯತ್ವ ಅಭಿಯಾನದ ಸಂಬಂಧ ರಾಜ್ಯ ಕಾರ್ಯಾಗಾರವು ಇಂದು (ಆ.24) ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 3ರ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದರು.

ಈ ಕಾರ್ಯಾಗಾರದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹ, ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭಾಗವಹಿಸುವರು ಎಂದು ತಿಳಿಸಿದ್ದಾರೆ.

ಈ ಕಾರ್ಯಾಗಾರದಲ್ಲಿ ಪಕ್ಷದ ರಾಜ್ಯದ ಎಲ್ಲ ಸಂಸದರು, ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪ್ರಮುಖ ಕಾರ್ಯಕರ್ತರು ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ. ಪಕ್ಷದ ಸಂಘಟನಾತ್ಮಕ ವ್ಯವಸ್ಥೆಯಲ್ಲಿ ಈ ಅಭಿಯಾನವು ಪ್ರಮುಖ ಪಾತ್ರವನ್ನು ವಹಿಸಲಿದೆ ಎಂದು ಮಾಹಿತಿ ನೀಡಿದರು.

ಓದಿ:ನಿಮ್ಮ ಜೊತೆ ನಾವಿದ್ದೇವೆ ಹೋರಾಟ ಮಾಡಿ: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹೈಕಮಾಂಡ್ - Congress High Command

ABOUT THE AUTHOR

...view details