ಕರ್ನಾಟಕ

karnataka

ETV Bharat / state

ರಾಜ್ಯದ ಬಹುತೇಕ ಕಡೆ ಹೈ ಅಲರ್ಟ್ ಘೋಷಣೆ: ಕರಾವಳಿ ಭಾಗದಲ್ಲಿ ಮತ್ತೆ ಇನ್ನೈದು ದಿನ ಹೆಚ್ಚಿನ ಮಳೆ ಮುನ್ಸೂಚನೆ! - high alert in coastal

ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗೆ ಐದು ದಿನಗಳವರೆಗೆ ಹೈ ಅಲರ್ಟ್​ ಘೋಷಿಸಿದೆ.

Rain
ಮಳೆ (IANS)

By ETV Bharat Karnataka Team

Published : Jul 11, 2024, 9:10 PM IST

ಬೆಂಗಳೂರು : ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಇನ್ನೈದು ದಿನಗಳ ಕಾಲ ಹೈ ಅಲರ್ಟ್ ಘೋಷಿಸಿದ್ದು, ಅಲ್ಲಿನ ಭಾಗಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡಕ್ಕೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಇನ್ನೂ ಮೂರು ದಿನ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್​ ನಂತರದ ನಾಲ್ಕು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ನಾಳೆಯಿಂದ ನಾಲ್ಕು ದಿನ, ನಾಳೆ ಮತ್ತು ಜುಲೈ 15 ರಂದು ಧಾರವಾಡ ಜಿಲ್ಲೆಗೆ, ಹಾವೇರಿ ಜಿಲ್ಲೆಗೆ ಜುಲೈ 15 ರಂದು, ಕಲ್ಬುರ್ಗಿ ಜಿಲ್ಲೆಗೆ ನಾಳೆ ಮತ್ತು ಜುಲೈ 14 ಮತ್ತು 15 ರಂದು, ರಾಯಚೂರು ಜಿಲ್ಲೆಗೆ ಜುಲೈ 14 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ ಜಿಲ್ಲೆಗೆ ಜುಲೈ 15 ರಂದು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ನಾಳೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಕೊಡಲಾಗಿದೆ. ಕೊಡಗು ಜಿಲ್ಲೆಗೆ ನಾಳೆಗೆ ಯೆಲ್ಲೋ ಅಲರ್ಟ್ ಅದರ ನಂತರದ ಮೂರು ದಿನ ಆರೆಂಜ್ ಅಲರ್ಟ್, ಹಾಸನ ಜಿಲ್ಲೆಗೆ ಜುಲೈ 14 ಮತ್ತು 15 ರಂದು ಯೆಲ್ಲೋ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರಿ ಮಳೆ ಮತ್ತು ನಿರಂತರ ಗಾಳಿಯು 30 ರಿಂದ ಕಿಲೋಮೀಟರ್ ಪ್ರತಿಗಂಟೆಗೆ ತಲುಪಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಲಘು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ ಮತ್ತು ನಿರಂತರ ಗಾಳಿ ಬೀಸಲಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂದಿನ 48 ಗಂಟೆ ಮೋಡ ಕವಿದ ಆಕಾಶ: ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ 30 ರಿಂದ 40 ಕಿಲೋಮೀಟರ್ ಪ್ರತಿ ಗಂಟೆಗೆ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ಆಗಿರಲಿದೆ.

ಕಾರವಾರ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 9, ಉಡುಪಿ ಜಿಲ್ಲೆಯ ಕೋಟದಲ್ಲಿ ಹಾಗು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ 7, ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಮತ್ತು ಕುಂದಾಪುರಲ್ಲಿ 6, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ 6, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಕುಮಟಾ, ಜೋಯಿಡಾ, ಗೇರ್ಸೊಪ್ಪ, ಗೋಕರ್ಣದಲ್ಲಿ, ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ 5 ಸೆ ಮೀ ಮಳೆಯಾಗಿದೆ.

'ನೈಋತ್ಯ ಮಾನ್ಸೂನ್ ಕರಾವಳಿಯಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣವಾಗಿದ್ದು ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ ಮತ್ತು ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ' ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್ ಪುವಿಯರಸನ್ ಹೇಳಿದ್ದಾರೆ.

ಇದನ್ನೂ ಓದಿ :ಉತ್ತರ ಕನ್ನಡದ ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ; ನೌಕಾನೆಲೆ ಎದುರು ನೀರು ನಿಂತು ಸಂಚಾರ ಅಸ್ತವ್ಯಸ್ತ - Traffic chaotic

ABOUT THE AUTHOR

...view details