ಕರ್ನಾಟಕ

karnataka

ETV Bharat / state

ರಾಜ್ಯದ ಹಲವೆಡೆ ಒಣಹವೆ: 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿರುವ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

yellow alert
ಮಳೆ (IANS)

By ETV Bharat Karnataka Team

Published : Oct 9, 2024, 12:23 PM IST

ಬೆಂಗಳೂರು: ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದಿರುವ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೈಸೂರು, ಮಂಡ್ಯ, ಹಾಸನ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬಹುತೇಕ ಕಡೆ ಒಣಹವೆ ಇರಲಿದೆ. ಕುಂದಾಪುರ, ಎಂಎಂ ಹಿಲ್ಸ್​, ಧರ್ಮಸ್ಥಳ, ಬೆಳ್ತಂಗಡಿ, ಕೋಟ, ಸಿದ್ದಾಪುರ, ಉಡುಪಿ, ಮಂಕಿ, ಕಮ್ಮರಡಿ, ಗೋಕರ್ಣ, ಕಾರ್ಕಳ, ಕದ್ರಾ, ಗೇರುಸೊಪ್ಪ, ಆಗುಂಬೆ, ಚಾಮರಾಜನಗರ, ಕಾರವಾರ, ಕಳಸ, ಚಿಕ್ಕಮಗಳೂರು, ತ್ಯಾಗರ್ತಿ, ಕಡೂರು ಹಾಗೂ ಕೋಲಾರದಲ್ಲಿ ಮಳೆಯಾಗಿದೆ ಎಂದು ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೊಡ ಚದುರಿದ್ದು, ಬಿಸಿಲು ಇದೆ. ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಇರಲಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ಹಾಗೂ 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ಹಾಗೂ 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಭಾರತೀಯ ರೈಲ್ವೆಯ 150ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ನವರಾತ್ರಿ ವಿಶೇಷ; ಥಾಲಿ ಊಟ ಪ್ರಾರಂಭ

ABOUT THE AUTHOR

...view details