ಕರ್ನಾಟಕ

karnataka

ETV Bharat / state

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ - RAIN

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Rain
ಮಳೆ (IANS)

By ETV Bharat Karnataka Team

Published : Oct 29, 2024, 10:53 AM IST

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 03 ರವರೆಗೆ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಹಿಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ ಇಳಿಕೆಯಾಗಿದ್ದು, ಬೆಳಗಿನ ಜಾವ 5 ಗಂಟೆಯಿಂದ ಚಳಿ ಶುರುವಾಗುತ್ತಿದ್ದು, ಬೆಳಗ್ಗೆ 10 ಗಂಟೆಯವರೆಗೂ ಚಳಿಯ ವಾತಾವರಣವಿದೆ.‌

ಈ ವರ್ಷ ಚಳಿಯ ಪ್ರಮಾಣ ದಾಖಲೆ ಬರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಳಿಗಾಲ ಆರಂಭಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಆದರೆ, ಸೈಕ್ಲೋನ್ ಎಫೆಕ್ಟ್​ನಿಂದಾಗಿ ಚಳಿಯ ಅನುಭವವಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ :ರಾಜ್ಯದ 16 ಜಿಲ್ಲೆಗಳಲ್ಲಿ ಅತ್ಯಧಿಕ ಹಿಂಗಾರು ಮಳೆ: ಅಕ್ಟೋಬರ್ - ಡಿಸೆಂಬರ್​ನಲ್ಲಿ ವಾಡಿಕೆಗಿಂತ ಅತಿಹೆಚ್ಚು ಮಳೆ ಸಾಧ್ಯತೆ

ABOUT THE AUTHOR

...view details