ಬೆಂಗಳೂರು : ಶಾಲೆಗಳತ್ತ ಮಕ್ಕಳನ್ನು ಸೆಳೆಯಲು ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅಪೌಷ್ಠಿಕತೆ ಹೋಗಲಾಡಿಸಲು ಹಾಗೂ ಶಾಲೆಗಳತ್ತ ಮಕ್ಕಳನ್ನು ಸೆಳೆಯಲು 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡಲಾಗುತ್ತಿದೆ. ಕ್ಷೀರಭಾಗ್ಯ ಯೋಜನೆಯಡಿ ಪ್ರತಿದಿನ ಹಾಲು ನೀಡಲಾಗುತ್ತಿದ್ದು, ಇದೀಗ ಹಾಲಿನ ಜೊತೆ ರಾಗಿ ಮಾಲ್ಟ್ ಪೌಡರ್ ಮಿಕ್ಸ್ ಮಾಡಿ ನೀಡಲಾಗುವುದು. ವಾರದ ಮೂರು ದಿನ ರಾಗಿ ಮಾಲ್ಟ್ ವಿತರಿಸಲಾಗುವುದು. ಇದೇ ತಿಂಗಳು 22ರಂದು ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ಸಿದ್ದರಾಮಯ್ಯ ನೀಡಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.