ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಅನುಭವಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕಂಟಕ ಎದುರಾಗುತ್ತದೆ ಎಂದು ಸಚಿವ ಬೈರತಿ ಸುರೇಶ್ ಅಚ್ಚರಿಯ ಹೇಳಿಕೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸಿದ್ದರಾಮಯ್ಯ ಸ್ಥಾನಕ್ಕೆ ಕಂಟಕ: ಸಚಿವ ಬೈರತಿ ಸುರೇಶ್ - Byrathi Suresh - BYRATHI SURESH
ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕ ಎಂದು ಬೈರತಿ ಸುರೇಶ್ ಹೇಳಿದ್ದಾರೆ.
Published : Apr 18, 2024, 8:17 PM IST
|Updated : Apr 19, 2024, 6:23 AM IST
ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬೈರತಿ ಸುರೇಶ್ ನೇತೃತ್ವದಲ್ಲಿ ಇಂದು ಕುರುಬ ಸಮುದಾಯದ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಕುರುಬ ಸಮುದಾಯ ಸಿದ್ದರಾಮಯ್ಯ ಕೈ ಬಲಪಡಿಸಬೇಕು. ನಿಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ನೀಡಬೇಕು. ಸಿದ್ದರಾಮಯ್ಯ ಹಾಗೂ ಅಭ್ಯರ್ಥಿ ಗೌತಮ್ ಅವರಿಗೂ ನಿಮ್ಮ ಬೆಂಬಲ ಬೇಕು. ಒಂದು ವೇಳೆ ನೀವು ಮನಸ್ಸು ಬದಲಾಯಿಸಿ ಬೇರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ. ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಬೇಕಾದರೆ ಹೆಚ್ಚಿನ ಲೀಡ್ ಕೊಡಬೇಕೆಂದು ಆಗ್ರಹಿಸಿದರು.