ಕರ್ನಾಟಕ

karnataka

ETV Bharat / state

ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ - Cheluvarayaswamy - CHELUVARAYASWAMY

ಸಚಿವ ಚಲುವರಾಯಸ್ವಾಮಿ ಅವರು ಮಂಡ್ಯದಲ್ಲಿಂದು ಟ್ರ್ಯಾಕ್ಟರ್ ಚಲಾಯಿಸಿ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು.

minister-cheluvarayaswamy
ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ಬಿತ್ತನೆ ಕಾರ್ಯಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ (ETV Bharat)

By ETV Bharat Karnataka Team

Published : Aug 2, 2024, 4:28 PM IST

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ (ETV Bharat)

ಮಂಡ್ಯ:ಜಿಲ್ಲೆಯಲ್ಲಿ ಇಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸ್ವತಃ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಜಿಎಸ್ಎಫ್ ಫೌಂಡೇಶನ್, ಭೂ ಸಿರಿ ರೈತ ಉತ್ಪಾದಕರ ಕಂಪನಿ, ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ಬಿತ್ತನೆ ರಾಗಿ ವಿತರಣೆ ಹಾಗೂ ರೈತ ರತ್ನ ಪ್ರಶಸ್ತಿ ವಿತರಣಾ ಸಮಾರಂಭ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಧಾನ್ಯಕ್ಕೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಸಚಿವರು ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಪ್ರತಿ ವರ್ಷದಂತೆ ಈ ವರ್ಷವೂ ರೈತರಿಗೆ ಬಿತ್ತನೆ ಬೀಜ ವಿತರಿಸುವ ಕೆಲಸ ಮಾಡಲಾಗುತ್ತಿದೆ. ಕಡಿಮೆ ಇಳುವರಿ ಹೊಂದಿರುವ ಪ್ರದೇಶದಲ್ಲಿ ಸುಮಾರು 4 ಸಾವಿರ ರೈತರನ್ನು ಆಯ್ಕೆ ಮಾಡಿದ್ದು, ಅವರನ್ನು ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರ್ ಜಮೀನಿಗೆ 6 ಸಾವಿರ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿದೆ.

ಇದರಲ್ಲಿ 4.5 ಸಾವಿರ ಪರಿಕರ ಹಾಗೂ 1.5 ಸಾವಿರ ಹಣ ನೇರವಾಗಿ ರೈತರ ಖಾತೆಗೆ ಜಮೆಯಾಗುತ್ತಿದೆ. ಸರ್ಕಾರದ ಯೋಜನೆಗಳನ್ನು‌ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢವಾಗಬೇಕು. ಬಿತ್ತನೆ ಬೀಜ, ರಾಸಾಯನಿಕ ಗೊಬ್ಬರ ಖರೀದಿಗೆ ರೈತರು ಅಧಿಕೃತ ರಶೀದಿ ಪಡೆದುಕೊಳ್ಳಬೇಕು. ಯಾವುದಾದರೂ ತೊಂದರೆ ಇದ್ದಲ್ಲಿ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ ಎಂದು ಸಚಿವರು ಹೇಳಿದರು.

ಇದೇ ಸಂದರ್ಭದಲ್ಲಿ ರೈತರಿಗೆ ರಾಗಿ ಬಿತ್ತನೆ ಬೀಜಗಳನ್ನು ವಿತರಿಸಿ ಪ್ರಗತಿಪರ ರೈತರಿಗೆ ಆತ್ಮೀಯವಾಗಿ ಸನ್ಮಾನಿಸಲಾಯಿತು. ನಂತರ ಮೃತ ರೈತರ ಕುಟುಂಬಕ್ಕೆ ಸರ್ಕಾರ ವತಿಯಿಂದ 5 ಲಕ್ಷ ರೂ ಪರಿಹಾರದ ಚೆಕ್ ಅನ್ನು ಸಚಿವರು ವಿತರಿಸಿದರು.

ವೇದಿಕೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ್ ಸೇರಿದಂತೆ ಪ್ರಗತಿಪರ ರೈತರು ಹಾಗೂ ಕೃಷಿ, ಅರಣ್ಯ, ತೋಟಗಾರಿಕೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಬೇಳೆ ಕಾಳು ಅಭಿವೃದ್ಧಿ ಮಂಡಳಿ ಮಾರುಕಟ್ಟೆ ವಿಸ್ತರಣೆಗೆ ಕೃಷಿ ಸಚಿವರ ಸೂಚನೆ

ABOUT THE AUTHOR

...view details