ಕರ್ನಾಟಕ

karnataka

ETV Bharat / state

ಮೈದಾನದ ಗೇಟ್ ಬಿದ್ದು ಮಗು ಸಾವು ಪ್ರಕರಣ ಸಂಬಂಧ ಗುತ್ತಿಗೆದಾರ, ಅಧಿಕಾರಿಗಳ ಮೇಲೆ ಕ್ರಮ : ಸಚಿವ ಗುಂಡೂರಾವ್ - Minister Dinesh Gundurao

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಲ್ಲೇಶ್ವರದ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್​ ಬಿದ್ದು ಬಾಲಕ ಮೃತಪಟ್ಟ ಕುರಿತು ಮಾತನಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Minister-dinesh-gundurao
ಸಚಿವ ದಿನೇಶ್ ಗುಂಡೂರಾವ್ (ETV Bharat)

By ETV Bharat Karnataka Team

Published : Sep 23, 2024, 9:08 PM IST

ಬೆಂಗಳೂರು :ಮಲ್ಲೇಶ್ವರದ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗೀಡಾದ ಪ್ರಕರಣ ಕುರಿತು ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸೋಮವಾರ ಮೃತ ಬಾಲಕನ ಮನೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂ ಹಾಗೂ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಅಲ್ಲದೇ ಬಾಲಕನ ಸಹೋದರಿಯ ಸಂಪೂರ್ಣ ವಿದ್ಯಾಭ್ಯಾಸದ ಹೊಣೆಯನ್ನು ಆರ್. ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ಹೇಳಿದರು.

ಈ ಬಗ್ಗೆ ಅಗತ್ಯ ತನಿಖೆ ನಡೆಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್ ಅಳವಡಿಸಲಾಗಿದೆ. ಈ ಕುರಿತು ವರದಿ ತರಿಸಿಕೊಳ್ಳುತ್ತೇವೆ. ಗೇಟ್ ಕಾಮಗಾರಿ ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಆದರೆ, ಈ ಕುರಿತು ಯಾರಿಂದಲೂ ದೂರು ಬಂದಿರಲಿಲ್ಲ ಎಂದು ಹೇಳಿದರು.

ಕಾಮಗಾರಿ ಕುರಿತು ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ತನಿಖೆ ನಡೆಸಲು ಇಂಜಿನಿಯರ್‌ಗಳ ಸಮಿತಿ : ತುಷಾರ್ ಗಿರಿನಾಥ್​ - ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮಲ್ಲೇಶ್ವರ ಆಟದ ಮೈದಾನದ ಗೇಟ್ ಬಿದ್ದು ಬಾಲಕ ಮೃತಪಟ್ಟಿದ್ದು, ಘಟನೆಯ ಕುರಿತು ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಮಗಾರಿಯ ಲೋಪಗಳನ್ನು ತನಿಖೆ ನಡೆಸಲು ಇಂಜಿನಿಯರ್‌ಗಳ ಸಮಿತಿಯನ್ನು ರಚಿಸಲಾಗಿದೆ. ಒಂದು ವಾರದೊಳಗೆ ವರದಿ ಪಡೆದು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಹ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ :ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಸಾವು - Gate Fell on Boy

ABOUT THE AUTHOR

...view details