ಕರ್ನಾಟಕ

karnataka

ETV Bharat / state

ದಸರಾ ಆನೆಗಳ ಬಳಿ ರೀಲ್ಸ್ ಮಾಡಲು ಅವಕಾಶ ನೀಡದಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ - ban on reels near elephants - BAN ON REELS NEAR ELEPHANTS

ಫೋಟೋಶೂಟ್ ಮತ್ತು ರೀಲ್ಸ್​ನಿಂದಾಗಿ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಶಿಬಿರದಿಂದ ತಂದ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಹೀಗಾಗಿ ದಸರಾ ಆನೆಗಳ ಬಳಿ ರೀಲ್ಸ್ ಮಾಡಲು ಅವಕಾಶ ನೀಡಕೂಡದು ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಸರಾ ಆನೆಗಳ ಬಳಿ ರೀಲ್ಸ್ ಮಾಡಲು ಅವಕಾಶ ನೀಡದಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ
ದಸರಾ ಆನೆಗಳ ಬಳಿ ರೀಲ್ಸ್ ಮಾಡಲು ಅವಕಾಶ ನೀಡದಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ (ETV Bharat)

By ETV Bharat Karnataka Team

Published : Sep 23, 2024, 4:17 PM IST

ಬೆಂಗಳೂರು:ದಸರಾ ಆನೆಗಳ ಬಳಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ, ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಈ ಸಂಬಂಧ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಂಜನ್​ ಮತ್ತು ಧನಂಜಯ್​ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ ಎಂದು ಉಲ್ಲೇಖಿಸಿದ್ದಾರೆ.

ಕೆಲವರು ಅನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಅನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ/ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ, ಇನ್ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ.

ಇದನ್ನೂ ಓದಿ:ದಸರಾ ಖಾಸಗಿ ದರ್ಬಾರ್​ಗೆ ಪಟ್ಟದ ಆನೆಯಾಗಿ ಕಂಜನ್‌, ನಿಶಾನೆ ಆನೆಯಾಗಿ ಭೀಮ ಆಯ್ಕೆ - Mysuru Dasara 2024

ABOUT THE AUTHOR

...view details