ಬೆಂಗಳೂರು:ಕೆಪಿಸಿಸಿ ಅಧ್ಯಕ್ಷರ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ನನ್ನ ಜೊತೆ ಏನೂ ಚರ್ಚೆಯಾಗಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಚಾರದ ಬಗ್ಗೆ ಸಿಎಂ, ಡಿಸಿಎಂ, ಕಾಂಗ್ರೆಸ್ ವರಿಷ್ಠರು ಹಾಗೂ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಕೆಪಿಸಿಸಿ ಅಧ್ಯಕ್ಷರ ವಿಷಯದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ತಿಳಿಸಿದರು.
ಮಲ್ಲಿಕಾರ್ಜುನ್ ಖರ್ಗೆ ಭೇಟಿ ಮಾಡಿ ಮಾತುಕತೆ ನಡೆಸಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಎಐಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಕಲ್ಯಾಣ ಕರ್ನಾಟಕ ಭಾಗ ಮತ್ತು ನಮ್ಮ ಇಲಾಖೆಯಲ್ಲಿ ಏನೇನ್ ಅಭಿವೃದ್ಧಿ ಆಗಿದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇನೆ. ಬೇರೆ ವಿಷಯದ ಬಗ್ಗೆ ಚರ್ಚೆಯಾಗಿಲ್ಲ ಎಂದರು.