ಬೆಂಗಳೂರು:ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ವಿವಾದ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಗುರುವಾರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಕೆ.ಹೆಚ್.ಮುನಿಯಪ್ಪ, ಟಿಕೆಟ್ ವಿಚಾರವಾಗಿ ಸಚಿವರು ಸೇರಿ ಕೋಲಾರ ಶಾಸಕರ ರಾಜೀನಾಮೆ ಪ್ರಹಸನದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹೈಕಮಾಂಡ್ ತಮ್ಮ ಅಳಿಯನಿಗೆ ಟಕೆಟ್ ಕೊಡಲು ಒಲವು ತೋರಿದ್ದರೂ, ಅದರ ವಿರುದ್ಧ ಕೋಲಾರ ಶಾಸಕರು ರಾಜೀನಾಮೆ ನಾಟಕವಾಡಿ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.
ನನ್ನ ಅಳಿಯನಿಗೆ ಟಿಕೆಟ್ ನೀಡಿದರೆ ಗೆಲ್ಲಿಸುತ್ತೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುನಿಯಪ್ಪ ಹೇಳಿದರು. ಇದಕ್ಕೆ ಸಿಎಂ ಹಾಗೂ ಡಿಸಿಎಂ ಪ್ರತಿಕ್ರಿಯಿಸಿ, ಹೈಕಮಾಂಡ್‌ಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡುವುದಾಗಿ ತಿಳಿಸಿದರು. ಸಿಎಂ, ಡಿಸಿಎಂ ಮಾತಿಗೆ ಸಹಮತ ವ್ಯಕ್ತಪಡಿಸಿ ಮುನಿಯಪ್ಪ ತೆರಳಿದ್ದಾರೆ.