ಕರ್ನಾಟಕ

karnataka

ETV Bharat / state

ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿದ ಮಹಿಳೆಗೆ ಪುಸ್ತಕ ನೀಡಿ ಶ್ಲಾಘಿಸಿದ ಲಕ್ಷ್ಮೀ ಹೆಬ್ಬಾಳ್ಕರ್

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗೃಹಲಕ್ಷ್ಮಿ ಹಣದಿಂದ ಗ್ರಂಥಾಲಯ ನಿರ್ಮಿಸಿರುವ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿ, ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

By ETV Bharat Karnataka Team

Published : Oct 15, 2024, 8:05 PM IST

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ತನ್ನೂರಿನ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯಿತಿಯ ಸದಸ್ಯೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೆಚ್ಚಿಕೊಂಡಿದ್ದಾರೆ.

ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಇವರನ್ನು ಸಾವಿತ್ರಿಬಾಯಿ ಫುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅಭಿನಂದನೆಗಳು ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಗ್ರಂಥಾಲಯಕ್ಕೆ 'ಗೃಹಲಕ್ಷ್ಮಿ' ಹೆಸರಿಡಲು ಮನವಿ: ಮಲ್ಲವ್ವ ಮೇಟಿ ನಿರ್ಮಿಸಿರುವ ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಎಂದು ಹೆಸರಿಡಲು ಸಚಿವೆ ಹೆಬ್ಬಾಳ್ಕರ್ ಮನವಿ ಮಾಡಿದರು. ಬಳಿಕ ಮಾತನಾಡುತ್ತಾ, ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ. ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಆಶಿಸಿದರು.

ಗ್ರಂಥಾಲಯಕ್ಕೆ 'ಕಾನೂರು ಹೆಗ್ಗಡತಿ' ಪುಸ್ತಕ ಉಡುಗೊರೆ:ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ 'ಕಾನೂರು ಹೆಗ್ಗಡತಿ' ಪುಸ್ತಕವನ್ನು ಲಕ್ಷ್ಮೀ ಹೆಬ್ಬಾಳ್ಕರ್ ಉಡುಗೊರೆಯಾಗಿ ನೀಡಿದ್ದಾರೆ. ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಇದನ್ನೂ ಓದಿ:ಬೆಳಗಾವಿ: ಗೃಹಲಕ್ಷ್ಮಿ ಹಣ, ಗೌರವ ಧನದಿಂದ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ಮಹಿಳೆ

ABOUT THE AUTHOR

...view details