ಕರ್ನಾಟಕ

karnataka

ETV Bharat / state

ಸಿಎಂ ಯಾರಾಗಬೇಕೆಂಬ ವಿಚಾರ ಹಾದಿ-ಬೀದಿಲಿ ಚರ್ಚಿಸುವುದಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ - Lakshmi Hebbalkar - LAKSHMI HEBBALKAR

ಸಿದ್ದರಾಮಯ್ಯ ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

By ETV Bharat Karnataka Team

Published : Sep 11, 2024, 3:16 PM IST

Updated : Sep 11, 2024, 5:03 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (ETV Bharat)

ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ ಇದೆ. ಹಾಗಾಗಿ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ ಎಲ್ಲಾ ನಗಣ್ಯ. ಮುಡಾ ಹಗರಣದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಏನೋ ಮಾಡುತ್ತಿದ್ದಾರೆ. ಇಂಥ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಶ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದರು.

ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ಕೈ ನಾಯಕರ ಹೇಳಿಕೆಗೆ ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.

ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಸಿಎಂ ರೇಸ್​ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ: ಸಚಿವ ದಿನೇಶ್ ಗುಂಡೂರಾವ್ - Dinesh Gundurao

Last Updated : Sep 11, 2024, 5:03 PM IST

ABOUT THE AUTHOR

...view details