ಶಿವಮೊಗ್ಗ: ಹಾವೇರಿ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸ್ವಗ್ರಾಮವಾದ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿಗೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತರಾದ ಆದರ್ಶ, ರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿ ಮಾನಸ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಗ್ರಾಮಸ್ಥರು ನಡೆಸಿದ ಸಭೆಯಲ್ಲಿ ಭಾಗಿಯಾಗಿ ಮೃತರ ಕುಟುಂಬಸ್ಥರ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡರು.
ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಮಧು ಬಂಗಾರಪ್ಪ ಭೇಟಿ: ಗೀತಾ ಶಿವರಾಜ್ಕುಮಾರ್ ದಂಪತಿಯಿಂದ ನೆರವು - Madhu Bangarappa - MADHU BANGARAPPA
ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಜನ ಮೃತಪಟ್ಟಿದ್ದರು. ಸಚಿವ ಮಧು ಬಂಗಾರಪ್ಪ ಇಂದು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಹಾವೇರಿ ಅಪಘಾತದಲ್ಲಿ ಮೃತಪಟ್ಟವರ ಮನೆಗಳಿಗೆ ಮಧು ಬಂಗಾರಪ್ಪ ಭೇಟಿ (ETV Bharat)
Published : Jun 29, 2024, 10:37 PM IST
|Updated : Jun 29, 2024, 10:52 PM IST
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆಯಾಗಿದ್ದು, ಇನ್ನೂ ಹೆಚ್ಚಿನ ಸಹಾಯ ಆರ್ಥಿಕ ಸಹಾಯ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಜೊತೆಗೆ ವೈಯಕ್ತಿಕವಾಗಿ ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರು ಪ್ರತಿಯೊಬ್ಬರ ಕುಟುಂಬದವರಿಗೆ ತಲಾ ಒಂದು ಲಕ್ಷ ರೂಪಾಯಿ ನೀಡಲು ಸಮ್ಮತಿಸಿದ್ದು, ಶೀಘ್ರವಾಗಿ ಕುಟುಂಬದವರಿಗೆ ತಲುಪಿಸುತ್ತೇನೆ ಎಂದು ಭರವಸೆ ನೀಡಿದರು.
Last Updated : Jun 29, 2024, 10:52 PM IST