ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಸಚಿವ ಎಂ.ಬಿ. ಪಾಟೀಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಅನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.