ಕಲಬುರಗಿ:ಇತ್ತೀಚಿಗೆ ಚಿತ್ತಾಪೂರ ತಾಲೂಕಿನ ಕರದಾಳ ಗ್ರಾಮದಲ್ಲಿರುವ ಕಸ್ತೂರ ಬಾ ವಸತಿ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಕಡಬೂರು ಗ್ರಾಮದ 16 ವರ್ಷದ ಬಾಲಕಿಯ ಪೋಷಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.
ಬಾಲಕಿ ಆತ್ಮಹತ್ಯೆಗೆ ದುಃಖ ವ್ಯಕ್ತಪಡಿಸಿದ ಸಚಿವರು, ಈ ಸಂಬಂಧ ವಸತಿ ಶಾಲೆಯ ಮಕ್ಕಳಿಗೆ ಕೌನ್ಸಲಿಂಗ್ ಮಾಡಿಸಲಾಗುವುದು ಎಂದು ತಿಳಿಸಿದರು. ಇಂತಹ ಸಂಕಷ್ಟದ ಸಂದರ್ಭದಲ್ಲಿ ತಾವು ಕುಟುಂಬದ ಜೊತೆಗೆ ಇರುವುದಾಗಿ ಸಚಿವರು ಭರವಸೆ ನೀಡಿದರು. ಜೊತೆಗೆ ತಮ್ಮ ಪಕ್ಷದ ವತಿಯಿಂದ 1 ಲಕ್ಷ ರೂ. ಪರಿಹಾರದ ಹಣವನ್ನು ಪೋಷಕರಿಗೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶೇಖ್ ಶಾಷಾವಲಿ, ಮುಖಂಡರಾದ ಮಹೇಮೂದ್ ಸಾಹೇಬ್, ಭೀಮಣ್ಣ ಸಾಲಿ, ಶಿವಾನಂದ ಪಾಟೀಲ ಸೇರಿದಂತೆ ಅನೇಕರಿದ್ದರು.