ಬೆಂಗಳೂರು:ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜಿನಿಯರುಗಳು ಈ ತಿಂಗಳಿನ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ, ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರ ವಹಿಸಲಾಗಿದೆ ಎಂದು ಅವರು ಹೇಳಿದರು.