ಕರ್ನಾಟಕ

karnataka

ETV Bharat / state

ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ: ಸಚಿವ ಸತೀಶ್ ಜಾರಕಿಹೊಳಿ - SATISH JARKIHOLI

ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ (ETV Bharat)

By ETV Bharat Karnataka Team

Published : Nov 29, 2024, 3:56 PM IST

ಹಾವೇರಿ:ಸಿಎಂ ಆಗಲೂ ಆಸೆಯಿದೆ, ಕೆಪಿಸಿಸಿ ಅಧ್ಯಕ್ಷನಾಗಲೂ ಆಸೆಯಿದೆ. ಇದೆಲ್ಲ ನಮ್ಮ ಉತ್ಸಾಹ ಅಷ್ಟೇ. ಪಕ್ಷದ ತೀರ್ಮಾನ ಅಂತಿಮ. ನಾವೆಲ್ಲ ಕಾದು ನೋಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಶಿಗ್ಗಾಂವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಈ ಹಿಂದೆ ಸತೀಶ್​ ಜಾರಕಿಹೊಳಿ ಸಿಎಂ ಆಗ್ತಾರೆ ಅಂತ ಸುದ್ದಿ ಹರಿದಾಡಿತ್ತು. ಈಗ ಕೆಪಿಸಿಸಿ ಅಧ್ಯಕ್ಷ ಆಗ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ವಿಚಾರವಾಗಿ ನಾನು ಯಾವುದೇ ಲಾಬಿನೂ ಮಾಡಿಲ್ಲ. ಒತ್ತಡವನ್ನೂ ಹಾಕಿಲ್ಲ. ಚುನಾವಣೆಯಲ್ಲಿ ಪಕ್ಷ ಗೆಲ್ಲಿಸಿದ್ದೇವೆ ಖುಷಿಯಿದೆ. ಮಂತ್ರಿಯಾಗಿದ್ದೇನೆ ತೃಪ್ತಿಯಿದೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅಹಿಂದ ನಾಯಕರಿಗೆ ಕೊಡಬೇಕು ಎಂಬ ಆಗ್ರಹ ಕೇಳಿ ಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು?, ಯಾಕೆ ಕೊಡಬೇಕು?, ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಅವರು ಚರ್ಚೆ ಮಾಡಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ (ETV Bharat)

ಅಧಿಕಾರ ಹಂಚಿಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಮಾತು ಕೇಳಿ ಬರುತ್ತಿರುವುದರ ಬಗ್ಗೆ ಮಾತನಾಡಿ, ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್‌ಫೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದರಾಬಾದ್​ ಕರ್ನಾಟಕಕ್ಕೆ ಒಳ್ಳೆಯ ಖಾತೆಗಳನ್ನೇ ಕೊಟ್ಟಿದಾರೆ ಎಂದು ತಿಳಿಸಿದರು.

ಸಿಎಂ ವಿರುದ್ಧ ಪತ್ರದ ಮೂಲಕ ದೂರು ವಿಚಾರ ಕುರಿತಂತೆ ಮಾತನಾಡಿ, ಎಲ್ಲಿದೆ ಪತ್ರ? ಯಾರಿಗೆ ಬರೆದರು? ಯಾಕೆ ಬರೆದರು? ಏನು ಆ್ಯಕ್ಷನ್ ತಗೊಂಡ್ರು ಎಂಬುದು ಬೇಕಲ್ವಾ? ಸುಮ್ಮನೇ ವಾಟ್ಸ್​ಆ್ಯಪ್​ನಲ್ಲಿ ಒಂದು ಪತ್ರ ಬಂದರೆ ಅದು ಇಡೀ ಪಕ್ಷದ ನಿರ್ಧಾರ ಆಗಲ್ಲ ಎಂದು ಹೇಳಿದರು.

ಕಾಂಗ್ರೆಸ್​ನಲ್ಲಿ ಬಣ ರಾಜಕೀಯ ಬಗ್ಗೆ ಮಾತನಾಡಿ, ಬಣ ಬಡಿದಾಟ ಇದೆ ಅಂತ ನಾನು ಹೇಳುತ್ತಿದ್ದೇನೆ. ನಮ್ಮ ಪಕ್ಷದಲ್ಲೂ ಇದೆ, ಬೇರೆ ಪಕ್ಷದಲ್ಲೂ ಬಣ ಬಡಿದಾಟ ಇದೆ. ಬಣಗಳು ಇರುತ್ತವೆ, ಆದರೆ ಚುನಾವಣೆ ಬಂದಾಗ ಒಂದಾಗುತ್ತೇವೆ ಎಂದರು.

ಇದನ್ನೂ ಓದಿ:ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ: ಜಮೀರ್ ಅಹ್ಮದ್ ಖಾನ್

ABOUT THE AUTHOR

...view details