ಕರ್ನಾಟಕ

karnataka

ETV Bharat / state

ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಬಳಕೆ; ಕಠಿಣ ನಿಯಮ ರೂಪಿಸಲು ಸಚಿವ ತಂಗಡಗಿ ಸೂಚನೆ - KANNADA ON NAMEPLATES

ರಾಜ್ಯದಲ್ಲಿ ನಾಮಫಲಕಗಳ ಮೇಲೆ ಶೇ.60ರಷ್ಟು ಕನ್ನಡ ಅಳವಡಿಕೆ‌ ಸಂಬಂಧ ಕಠಿಣ ಅಂತಿಮ ಕರಡು ನಿಯಮ ಜಾರಿಗೊಳಿಸಲು ಸಚಿವ‌ ಶಿವರಾಜ್ ಎಸ್.ತಂಗಡಗಿ ಸೂಚಿಸಿದ್ದಾರೆ.

KANNADA ON NAMEPLATES
ಸಚಿವ‌ ಶಿವರಾಜ್ ಎಸ್.ತಂಗಡಗಿ ಸಭೆ (ETV Bharat)

By ETV Bharat Karnataka Team

Published : Jan 30, 2025, 5:34 PM IST

ಬೆಂಗಳೂರು:ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ಎಸ್. ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಈ ಸೂಚನೆ ನೀಡಿದರು.

ಸಚಿವ‌ ಶಿವರಾಜ್ ಎಸ್.ತಂಗಡಗಿ ಸಭೆ (ETV Bharat)

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕವು ಸಮರ್ಪಕವಾಗಿ ಅನುಷ್ಠಾನ ಆಗಲೇಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ, ಕಠಿಣ ಕ್ರಮ ಆಗಬೇಕು. ಶೀಘ್ರವೇ ನಿಯಮಗಳ ಬಗ್ಗೆ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್‌ ರಚನೆ ಮಾಡಬೇಕು. ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ. ಎನ್. ಮಂಜುಳಾ, ನಿರ್ದೇಶಕರಾದ ಡಾ. ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಮೈಕ್ರೋ ಫೈನಾನ್ಸ್, ಲೇವಾದೇವಿದಾರರ ಕಿರುಕುಳಕ್ಕೆ ಬ್ರೇಕ್ ಹಾಕಲು ಕರಡು ಮಸೂದೆ: ಇಂದು ಸಂಪುಟ ಸಭೆಯಲ್ಲಿ ಒಪ್ಪಿಗೆ?

ABOUT THE AUTHOR

...view details