ಬೆಂಗಳೂರು:ಭಾರತ ಕ್ರಿಕೆಟ್ ತಂಡಕ್ಕೆ ಮರಳಲು ನಗರದ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯಲ್ಲಿ ಸಿದ್ಧತೆ ನಡೆಸುತ್ತಿರುವ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿದ್ದಾರೆ.
ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಶಮಿ ಎಡ ಹಿಮ್ಮಡಿ ಗಾಯಕ್ಕೆ ತುತ್ತಾಗಿದ್ದರು. ನಂತರ ಕೆಲವು ಕ್ರಿಕೆಟ್ ಸರಣಿಗಳಿಂದ ವಿಶ್ರಾಂತಿ ಪಡೆದಿದ್ದರು. ಜನವರಿಯಲ್ಲಿ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಐಪಿಎಲ್ ಹಾಗೂ ಟಿ-20 ವಿಶ್ವಕಪ್‌ನಿಂದ ಹೊರಗುಳಿದಿದ್ದರು.