ಹುಬ್ಬಳ್ಳಿ:ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. 19 ವರ್ಷದ ಯುವಕ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.
ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.