ಬೆಂಗಳೂರು: ಮಾವನ ಮಗನ ಕಿರುಕುಳದಿಂದ ಬೇಸತ್ತು ಬಾಲಕಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆೆಗೆ ಶರಣಾದ ಘಟನೆ ಬಾಗಲಗುಂಟೆ ಶೆಟ್ಟಿಹಳ್ಳಿಯಲ್ಲಿ ಬುಧವಾರ ನಡೆದಿದೆ. ಸಾವನ್ನಪ್ಪಿದ 16 ವರ್ಷದ ಬಾಲಕಿ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಕಿರುಕುಳ ನೀಡುತ್ತಿದ್ದ ಆರೋಪದಡಿ ಮಾವನ ಮಗ ಸ್ವಾಗತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
"ಸ್ವಾಗತ್ ಹಾಗೂ ಬಾಲಕಿ ಹಲವು ವರ್ಷಗಳಿಂದ ಅನ್ಯೋನ್ಯವಾಗಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆೆ ಭಿನ್ನಾಭಿಪ್ರಾಯ ಮೂಡಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಕೋಪಗೊಂಡ ಆರೋಪಿ, ಬಾಲಕಿಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುವುದು, ಸಾರ್ವಜನಿಕವಾಗಿ ನಿಂದಿಸುವುದನ್ನು ಮಾಡುತ್ತಿದ್ದ. ಬುಧವಾರ ಸಂಜೆ ಬಾಲಕಿಯ ತಾಯಿ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.