ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ಪವಾಡಸದೃಶ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಕಾರು ಅಪಫಾತ: ಕೊಳ್ಳೇಗಾಲ ಶಾಸಕ ಅದೃಷ್ಟವಶಾತ್ ಅಪಾಯದಿಂದ ಪಾರು - MLA Car tyre blast - MLA CAR TYRE BLAST
ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ.
Published : Apr 25, 2024, 9:53 AM IST
ಕೊಳ್ಳೇಗಾಲದಿಂದ ಶಾಸಕರು ಮೈಸೂರಿನತ್ತ ತೆರಳುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಬದಿ ಹಳ್ಳಕೆ ಇಳಿದು ನಿಂತಿದೆ. ಯಾವುದೇ ಬೇರೆ ವಾಹನಗಳು ಆ ವೇಳೆ ಇಲ್ಲದಿರುವುದು ಜೊತೆಗೆ ಕಾರು ರಸ್ತೆಬದಿಯ ಹಳ್ಳಕ್ಕೆ ಬಂದು ನಿಂತಿದ್ದರಿಂದ ಎಲ್ಲರೂ ಅಪಾಯದಿಂದ ಪಾರಾಗಿದ್ದೇವೆ. ಯಾರಿಗೂ ಯಾವ ಅಪಾಯವೂ ಆಗಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಚೇತನ್ ತಿಳಿಸಿದ್ದಾರೆ.
ಇದನ್ನೂ ಓದಿ:ಭೀಕರ ರಸ್ತೆ ಅಪಘಾತ: ಬಾಲಕಿ ಸೇರಿ ಆರು ಮಂದಿ ದುರ್ಮರಣ - Six killed in accident in Telangana