ಬೆಂಗಳೂರು: ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ವಿವೇಕನಗರದ ಮಾಯಾಬಜಾರ್ನಲ್ಲಿ ಮಂಗಳವಾರ ತಡರಾತ್ರಿ 2.30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ರೌಡಿ ಶೀಟರ್ ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮೃತನ ವಿರುದ್ಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಅಪರಾಧವೆಸಗುವ ಪ್ರವೃತ್ತಿ ಬೆಳೆಸಿಕೊಂಡಿದ್ದ ಸತೀಶ್ ಮಂಗಳವಾರ ರಾತ್ರಿ ಮನೆ ಹೊರಗಡೆ ಮಲಗಿದ್ದ. ದುಷ್ಕರ್ಮಿಗಳು ಇದನ್ನು ಅರಿತು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹತ್ಯೆಗೆ ಹಳೆ ದ್ವೇಷವಿರಬಹುದು ಎಂದು ಶಂಕಿಸಿರುವ ವಿವೇಕನಗರ ಠಾಣೆಯ ಪೊಲೀಸರು, ಈ ಸಂಬಂಧ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.