ಭಜರಂಗದಳದ ಸಂಯೋಜಕ ಮುರಳಿ ಕೃಷ್ಣ ಹೇಳಿಕೆ ಮಂಡ್ಯ: ಹನುಮಧ್ವಜ ತೆರವುಗೊಳಿಸಿದ್ದನ್ನು ವಿರೋಧಿಸಿ ಇಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಮಂಡ್ಯ ನಗರ ಹಾಗೂ ಕೆರಗೋಡು ಗ್ರಾಮ ಬಂದ್‌ಗೆ ಕರೆ ನೀಡಿದ್ದರು. ಹಿಂದೂಪರ ಸಂಘಟನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಹೋರಾಟವನ್ನು ಬೆಂಬಲಿಸಿದರು. ಆಂಜನೇಯ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಕೆರಗೋಡು ಗ್ರಾಮದಿಂದ ಮಂಡ್ಯದವರೆಗೂ ಕಾರ್ಯಕರ್ತರು ಬೃಹತ್ ಬೈಕ್ ರ್‍ಯಾಲಿ ನಡೆಸಿದರು.
ಜನವರಿ 28ರಂದು ಕೆರಗೋಡು ಗ್ರಾಮದಲ್ಲಿ ಅರ್ಜುನ ಸ್ತಂಭದ ಮೇಲಿದ್ದ ಹನುಮ ಧ್ವಜ ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಇದನ್ನು ವಿರೋಧಿಸಿ ಭಜರಂಗದಳ, ವಿಶ್ವಹಿಂದೂ ಪರಿಷತ್ ಹಾಗೂ ಶ್ರೀರಾಮ ಭಜನಾ ಮಂಡಳಿ ಬಂದ್‌ಗೆ ಕರೆ ನೀಡಿದ್ದವು.
ಮಂಡ್ಯ ನಗರದಲ್ಲಿ ಬಂದ್ ಅಷ್ಟಾಗಿ ಯಶಸ್ಸು ಕಾಣಲಿಲ್ಲ. ಕೆಲವೆಡೆ ಸ್ವಯಂಪ್ರೇರಿತವಾಗಿ ಬಂದ್ ಮಾಡಿದರೆ, ಬಹುತೇಕ ಕಡೆ ವ್ಯಾಪಾರ ವಹಿವಾಟು ಎಂದಿನಂತಿತ್ತು. ಮಂಡ್ಯದಲ್ಲಿ ಕಾರ್ಯಕರ್ತರು ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿ ಸಿಲ್ವರ್ ಜ್ಯುಬಿಲಿ ಪಾರ್ಕ್ನಿಂದ ಡಿಸಿ ಕಚೇರಿವರೆಗೂ ಪಾದಯಾತ್ರೆ ನಡೆಸಿ, ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಬಂದ್‌ಗೆ ಬೆಂಬಲ ಸೂಚಿಸದ ಬಿಜೆಪಿ:ಹನುಮಧ್ವಜ ತೆರವಾದ ನಂತರ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಸಾಕಷ್ಟು ಹೋರಾಟ ನಡೆಸಿದ್ದರು. ಜೊತೆಗೆ ಪಾದಯಾತ್ರೆಯನ್ನೂ ನಡೆಸಿದ್ದರು. ಇಂದಿನ ಹಿಂದೂಪರ ಸಂಘಟನೆ ಕಾರ್ಯಕರ್ತರ ಬಂದ್‌ಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಸೂಚಿಸಿದ್ದರು. ಆದರೆ ಜೆಡಿಎಸ್ ತದನಂತರ ಅಂತರ ಕಾಯ್ದುಕೊಂಡಿತ್ತು. ಮನೆ ಮನೆಗೂ ಹನುಮಧ್ವಜ ಕಟ್ಟಿರುವ ವಿಚಾರವಾಗಿ ಕೂಡ ಜೆಡಿಎಸ್ ಜೊತೆ ಬಂದಿರಲಿಲ್ಲ. ಬಿಜೆಪಿ ಕೂಡಾ ಇಂದಿನ ಹೋರಾಟಕ್ಕೆ ಬೆಂಬಲ ಸೂಚಿಸಲಿಲ್ಲ.
ಇದನ್ನೂ ಓದಿ:ಕೆರಗೋಡು ಹನುಮಧ್ವಜ ತೆರವು ಖಂಡಿಸಿ ನಾಳೆ ಮಂಡ್ಯ ನಗರ ಬಂದ್‌ಗೆ ಕರೆ