ಚಿಕ್ಕಮಗಳೂರು:ನಗರದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ಜಿಲ್ಲಾಸ್ಪತ್ರೆಗೆ ಬಿಜೆಪಿ ಶಾಸಕ ಸಿ.ಟಿ.ರವಿ ಮತ್ತು ಬಿಜೆಪಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು. ನಂತರ ಜಿಲ್ಲಾಸ್ಪತ್ರೆಯ ಸ್ವಚ್ಛತೆ ಹಾಗೂ ವೈದ್ಯರ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದರು.
ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡೆಂಘೀ ರೋಗಿಗಳ ಆರೋಗ್ಯ ವಿಚಾರಿಸಿದ ಸಂಸದ, ಶಾಸಕ - Dengue Cases In Chikkamagaluru
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಶಾಸಕ ಸಿ.ಟಿ.ರವಿ ಹಾಗೂ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ, ಡೆಂಘೀ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ.
Published : Jun 12, 2024, 7:52 PM IST
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಟಿ.ರವಿ, "ಹಳ್ಳಿಗಳಲ್ಲಿ ಕಳೆದ 10-12 ದಿನಗಳಿಂದ ವ್ಯಾಪಕವಾಗಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಘೀ ರೋಗಿಗಳಿದ್ದಾರೆ. ಆರೋಗ್ಯ ಇಲಾಖೆ, ಜಿಲ್ಲಾಡಳಿತ ಯುದ್ಧೋಪಾದಿಯಲ್ಲಿ ಕ್ರಮ ಜರುಗಿಸಬೇಕು. ಲಾರ್ವ ಪತ್ತೆ ಹಚ್ಚಿ ನಾಶಪಡಿಸುವ ಕೆಲಸ ಆಗಬೇಕು. ಮನೆ ಮನೆಗೆ ತೆರಳಿ ಲಾರ್ವ ಪರೀಕ್ಷೆ ಮಾಡಬೇಕು. ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು" ಎಂದರು.
ಇದನ್ನೂ ಓದಿ:ರಾಜ್ಯಕ್ಕೆ ಆಗಮಿಸಿದ ರಾಹುಲ್ ಗಾಂಧಿಗೆ ಸಿ.ಟಿ.ರವಿ 8 ಪ್ರಶ್ನೆ - C T Ravi