ಗಂಗಾವತಿ(ಕೊಪ್ಪಳ):ಶಾಸಕ ಜನಾರ್ದನ ರೆಡ್ಡಿ ಅವರ ರೇಂಜ್ ರೋವರ್ ಕಾರು ಹಾಗೂ ಅವರ ಬೆಂಬಲಿಗರ ಎರಡು ಕಾರುಗಳನ್ನು ಮಂಗಳವಾರ ನಗರದ ಸಂಚಾರಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಗಂಗಾವತಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುವ ಸಂದರ್ಭದಲ್ಲಿ ಝೀರೊ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದರಿಂದ ರೆಡ್ಡಿ ಕಾರು ಚಾಲಕ ಹುಸೇನ್ ಸೇರಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿತ್ತು.